CISF Recruitment 2023: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(Central Industrial Security) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 451 ಕಾನ್ಸ್ಟೇಬಲ್, ಡ್ರೈವರ್ & ಪಂಪ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು. ಜನವರಿ 23ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ |
ಹುದ್ದೆ | ಕಾನ್ಸ್ಟೇಬಲ್, ಡ್ರೈವರ್ & ಪಂಪ್ ಆಪರೇಟರ್ |
ಒಟ್ಟು ಹುದ್ದೆ | 451 |
ವೇತನ | ಮಾಸಿಕ 21,700-69,100 ರೂ. |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆ ದಿನ | ಫೆಬ್ರವರಿ 22, 2023 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 22, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅನುಭವ:
ಅಭ್ಯರ್ಥಿಗಳು ಹೆವಿ ಮೋಟಾರು ವೆಹಿಕಲ್/ ಟ್ರಾನ್ಸ್ಪೋರ್ಟ್ ವೆಹಿಕಲ್/ ಲಘು ಮೋಟಾರು ವೆಹಿಕಲ್ ಮತ್ತು ಮೋಟಾರ್ ಸೈಕಲ್ ಚಾಲನೆ ಮಾಡಿರುವ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಡಿಯೋ ಎಡಿಟರ್ ಹುದ್ದೆಗೆ Apply ಮಾಡಿ- ವಾರ್ಷಿಕ ಪ್ಯಾಕೇಜ್ 6.75 ಲಕ್ಷ
ವೇತನ:
ಮಾಸಿಕ 21,700-69,100 ರೂ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST/ESM ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
UR/EWS/OBC ಅಭ್ಯರ್ಥಿಗಳು- 100 ರೂ.
ಪಾವತಿಸುವ ವಿಧಾನ- ಆನ್ಲೈನ್/ SBI ಚಲನ್
ಆಯ್ಕೆ ಪ್ರಕ್ರಿಯೆ:
ಪಿಎಸ್ಟಿ
ಪಿಇಟಿ ಡಾಕ್ಯುಮೆಂಟೇಶನ್
ಲಿಖಿತ ಪರೀಕ್ಷೆ/CBT
ಹೈಟ್ ಬಾರ್ ಟೆಸ್ಟ್ (HBT)
ಟ್ರೇಡ್ ಟೆಸ್ಟ್
ಮೆಡಿಕಲ್ ಎಕ್ಸಾಂ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/01/ 2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 22, 2023
ಅರ್ಜಿ ಶುಲ್ಕ ಕಟ್ಟಲು ಕೊನೆ ದಿನ: ಫೆಬ್ರವರಿ 24, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ