Coffee Board Recruitment 2023: ಭಾರತೀಯ ಕಾಫಿ ಮಂಡಳಿ(Coffee Board of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಿಸ್ಟಂ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ಇ-ಮೇಲ್ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಕಾಫಿ ಮಂಡಳಿ |
ಹುದ್ದೆ | ಸಿಸ್ಟಂ ಎಂಜಿನಿಯರ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿಎಸ್ಸಿ (ಅಗ್ರಿ) |
ವೇತನ | ಮಾಸಿಕ ₹ 40,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 13, 2023 |
ಹುದ್ದೆಯ ಅವಧಿ:
11 ತಿಂಗಳು
ಸಿಸ್ಟಂ ಎಂಜಿನಿಯರ್ ಹುದ್ದೆಗೆ ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ.
ಇದನ್ನೂ ಓದಿ: Karnataka Jobs: ತಿಂಗಳಿಗೆ 50,000 ಸಂಬಳ- ಆರೋಗ್ಯ ಸೌಧದಲ್ಲಿ ಫೆ.15ಕ್ಕೆ ಸಂದರ್ಶನ
ವೇತನ:
ಸಿಸ್ಟಂ ಎಂಜಿನಿಯರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 40,000 ಸಂಬಳ ಕೊಡಲಾಗುತ್ತದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಸ್ಸಿ (ಅಗ್ರಿ) ಜೊತೆಗೆ ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಪಿಜಿ ಡಿಪ್ಲೊಮಾ/ ಮಾಸ್ಟರ್ಸ್ ಪೂರ್ಣಗೊಳಿಸಿರಬೇಕು.
ಅನುಭವ:
ಅಭ್ಯರ್ಥಿಗಳು ಸಾಫ್ಟ್ವೇರ್ ಟೆಸ್ಟಿಂಗ್ನಲ್ಲಿ ಕನಿಷ್ಠ 6 ತಿಂಗಳು ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಇತರೆ ಕೌಶಲ್ಯಗಳು:
ಕೋಡಿಂಗ್ & ಸ್ಕ್ರಿಪ್ಟಿಂಗ್ ಸ್ಕಿಲ್ಸ್
ಅನಾಲಿಟಿಕಲ್ ಸ್ಕಿಲ್ಸ್
ಇನ್ಫರ್ಮೇಶನ್ ಸೆಕ್ಯುರಿಟಿ
ಡಿಸಿಶನ್ ಮೇಕಿಂಗ್
ಉತ್ತಮ ಸಂವಹನ ಕೌಶಲ್ಯ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು.
ಇದನ್ನೂ ಓದಿ: KSRTCಯಲ್ಲಿ ಖಾಲಿ ಇರುವ SDA, FDA ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ ddmr.coffeeboard@gmail.com ಗೆ ಫೆಬ್ರವರಿ 13ಕ್ಕೆ ಮುನ್ನ ಕಳುಹಿಸಬೇಕು.
ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಬಳಿಕ ಇಂಟರ್ವ್ಯೂ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 13, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ