CPCRI Recruitment 2023: ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ( Central Plantation Crops Research Institute-CPCRI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯಂಗ್ ಪ್ರೊಫೆಶನಲ್(Young Professional) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡದಲ್ಲಿ(Dakshina Kannada) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 29, 2022 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 1 |
ವೇತನ | ತಿಂಗಳಿಗೆ 25,000 |
ಉದ್ಯೋಗದ ಸ್ಥಳ | ದಕ್ಷಿಣ ಕನ್ನಡ |
ಇದನ್ನೂ ಓದಿ: ಬಿಎಸ್ಸಿ ಪದವೀಧರರಿಗೆ ನಿಮ್ಹಾನ್ಸ್ನಲ್ಲಿದೆ ಉದ್ಯೋಗ-1.40 ಲಕ್ಷ ಸಂಬಳ, ಈಗಲೇ ರೆಸ್ಯೂಮ್ ಕಳುಹಿಸಿ
ವಯೋಮಿತಿ:
ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 31, 2022ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಯಂಗ್ ಪ್ರೊಫೆಶನಲ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 25,000 ಸಂಬಳ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 14/12/2022
ಸಂದರ್ಶನ ನಡೆಯುವ ದಿನ: 29/12/2022 ಗುರುವಾರ ಬೆಳಗ್ಗೆ 10 ಗಂಟೆಗೆ
ಇದನ್ನೂ ಓದಿ: CBI Recruitment 2023: ತಿಂಗಳಿಗೆ 40,000 ಸಂಬಳ-ಕೇಂದ್ರೀಯ ತನಿಖಾ ದಳದಲ್ಲಿ ಕೆಲಸ ಖಾಲಿ ಇದೆ
ಸಂದರ್ಶನ ನಡೆಯುವ ಸ್ಥಳ:
ICAR-CPCRI
ಪ್ರಾದೇಶಿಕ ಠಾಣೆ ವಿಟ್ಟಲ್
ದಕ್ಷಿಣ ಕನ್ನಡ
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ