CRPF Recruitment 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆ(Central Reserve Police Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1458 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಹಾಗೂ ಹೆಡ್ ಕಾನ್ಸ್ಟೇಬಲ್(Head Constable) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಜನವರಿ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ಮೀಸಲು ಪೊಲೀಸ್ ಪಡೆ |
ಹುದ್ದೆ | ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ , ಹೆಡ್ ಕಾನ್ಸ್ಟೇಬಲ್ |
ಒಟ್ಟು ಹುದ್ದೆ | 1458 |
ವೇತನ | ತಿಂಗಳಿಗೆ ₹ 25,500-92,300 |
ಉದ್ಯೋಗದ ಸ್ಥಳ | ಭಾರತ |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/01/2023
ಇದನ್ನೂ ಓದಿ: BEL Recruitment: ಬಿಇಎಲ್ ಸಂಸ್ಥೆಯಿಂದ ನೇಮಕಾತಿ: 40 ಸಾವಿರ ರೂ. ವೇತನ, ಇಲ್ಲಿ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 25, 2023ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ25 ವರ್ಷ ಮೀರಿರಬಾರದು.
ವೇತನ:
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋ)- ತಿಂಗಳಿಗೆ ₹ 29,200-92,300
ಹೆಡ್ ಕಾನ್ಸ್ಟೇಬಲ್ (ಮಿನಿಸ್ಟೀರಿಯಲ್)- ತಿಂಗಳಿಗೆ ₹ 25,500-81,100
ಆಯ್ಕೆ ಪ್ರಕ್ರಿಯೆ:
ಪಿಇಟಿ
ಪಿಎಂಟಿ
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ದಾಖಲಾತಿ ಪರಿಶೀಲನೆ
ಮೆಡಿಕಲ್ ಪರೀಕ್ಷೆ
ಇದನ್ನೂ ಓದಿ: NTRO Recruitment 2023: ಪದವೀಧರರಿಗೆ ತಿಂಗಳಿಗೆ 1,42,400 ರೂ. ಸಂಬಳದ ಕೆಲಸ: ಮಾಹಿತಿ ಇಲ್ಲಿದೆ
ಉದ್ಯೋಗದ ಸ್ಥಳ:
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ