ಸಂಸ್ಕೃತಿ ಸಚಿವಾಲಯವು(Ministry of Culture) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಡಿಪ್ಲೋಮಾ, ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಕೇಂದ್ರ ಸರ್ಕಾರದ(Central Government Job) ಹುದ್ದೆ ಸೇರಬಹುದು. ಅನೇಕ ಸರ್ವೇಯರ್ಸ್(Surveyors) ಹುದ್ದೆಗಳು ಖಾಲಿ ಇದ್ದು, ಸಂಸ್ಕೃತಿ ಸಚಿವಾಲಯ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸಂಸ್ಕೃತಿ ಸಚಿವಾಲಯವು ಭಾರತ ಸರ್ಕಾರದ ಸಚಿವಾಲಯವಾಗಿದ್ದು, ಭಾರತದ ವಿವಿಧ ಕಲೆಗಳನ್ನು ಸಂರಕ್ಷಿಸುವ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದೆ. ಪ್ರಹ್ಲಾದ ಸಿಂಗ್ ಪಟೇಲ್ ಪ್ರಸ್ತುತ ಸಂಸ್ಕೃತಿ ಸಚಿವಾಲಯದ ಸಚಿವರಾಗಿದ್ದಾರೆ.
ಇದೇ ಜನವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು ಎಂದು ಸಚಿವಾಲಯವು ನೋಟಿಫಿಕೇಶನ್ನಲ್ಲಿ ತಿಳಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸಂಸ್ಕೃತಿ ಸಚಿವಾಲಯ |
ಹುದ್ದೆ | ಸರ್ವೇಯರ್ |
ವಿದ್ಯಾರ್ಹತೆ | ITI, ಡಿಪ್ಲೊಮಾ |
ವೇತನ | ನಿಯಮಾನುಸಾರ |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಉದ್ಯೋಗದ ಸ್ಥಳ | ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 23, 2023 |
ವಿದ್ಯಾರ್ಹತೆ:
ಸಂಸ್ಕೃತಿ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ITI, ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನಿಗದಿಪಡಿಸಿಲ್ಲ.
ವೇತನ:
ನಿಯಮಾನುಸಾರ ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 23, 2023
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಉದ್ಯೋಗ ಮಾಡ ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕೇಂದ್ರೀಯ ಸದನ
5 ನೇ ಮಹಡಿ, 'ಎಫ್' ವಿಂಗ್
ಕೋರಮಂಗಲ
ಬೆಂಗಳೂರು -560 034
ಇ-ಮೇಲ್:
circlebangalore.asi@gov.in
circleban.asi@gmail.com
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ