Directorate of Enforcement Recruitment 2022: ಜಾರಿ ನಿರ್ದೇಶನಾಲಯ (Directorate of Enforcement)ವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಲೀಗಲ್ ಕನ್ಸಲ್ಟೆಂಟ್(Legal Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 13, 2022 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ.
ಅಭ್ಯರ್ಥಿಗಳು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಾರಿ ನಿರ್ದೇಶನಾಲಯ |
ಹುದ್ದೆ | ಲೀಗಲ್ ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 6 |
ವಿದ್ಯಾರ್ಹತೆ | ಎಲ್ಎಲ್ಬಿ |
ವೇತನ | ಮಾಸಿಕ ₹ 80,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆ ದಿನ | 13/12/2022 |
ಅಧಿಕೃತ ವೆಬ್ಸೈಟ್ | enforcementdirectorate.gov.in |
ಇದನ್ನೂ ಓದಿ: PNB Recruitment 2023: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ 12 ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳ 15 ಲಕ್ಷ
ವೇತನ:
ಜಾರಿ ನಿರ್ದೇಶನಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಲೀಗಲ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 80,000 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಜಾರಿ ನಿರ್ದೇಶನಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಲೀಗಲ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಲೀಗಲ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಲು ಡಿಸೆಂಬರ್ 13, 2022 ಅಂದರೆ ನಾಳೆಯೇ ಕೊನೆ ದಿನವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ