ನಿರುದ್ಯೋಗಿಗಳಿಗೆ ಗುಡ್ನ್ಯೂಸ್(Good News). ಅದರಲ್ಲೂ ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಪ್ರಸಾರ ಭಾರತಿ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ವಿಡಿಯೋಗ್ರಾಫರ್ (Videographer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಪೂರ್ಣ ಸಮಯದ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳು ನವದೆಹಲಿಯಲ್ಲಿ (New Delhi) ಕೆಲಸ ಮಾಡಬೇಕು. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಹಾಕಬೇಕು ಎಂದು ನೋಟಿಫಿಕೇಶನ್ನಲ್ಲಿ (Notification) ತಿಳಿಸಲಾಗಿದೆ.
ಏಪ್ರಿಲ್ 18 ರಂದು prasarbharat.org ವೆಬ್ಸೈಟ್ನಲ್ಲಿ ಈ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಜಾಹೀರಾತು ಪ್ರಕಟವಾದ 15 ದಿನಗಳೊಳಗೆ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: Private Jobs: ಪೂರ್ವಿಕಾ ಮೊಬೈಲ್ಸ್ನಲ್ಲಿ PU ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 25,000 ಸಂಬಳ
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000 ಸಂಬಳ ಕೊಡಲಾಗುತ್ತದೆ. ಅಭ್ಯರ್ಥಿಗಳನ್ನು 2 ವರ್ಷಗಳ ಅವಧಿಗೆ ನೇಮಿಸಿಕೊಳ್ಳಲಾಗುತ್ತೆ ಎಂದು ತಿಳಿಸಲಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು. ಜೊತೆಗೆ, ಸಿನಿಮಾಟೋಗ್ರಫಿ/ ವಿಡಿಯೋಗ್ರಫಿಯಲ್ಲಿ ಪದವಿ/ಡಿಪ್ಲೊಮಾ ಪೂರ್ಣಗೊಳಿಸಿರಬೇಕು. MOJO ಅನುಭವ ಹೊಂದಿರುವ ಮತ್ತು ಶಾರ್ಟ್ ಫಿಲ್ಮ್ ಕೋರ್ಸ್ ಕಲಿತಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಸಂಸ್ಥೆ | ದೂರದರ್ಶನ ನ್ಯೂಸ್ |
ಹುದ್ದೆ | ವಿಡಿಯೋಗ್ರಾಫರ್ |
ಒಟ್ಟು ಹುದ್ದೆ | 41 |
ವಿದ್ಯಾರ್ಹತೆ | ಪಿಯುಸಿ, ಪದವಿ/ಡಿಪ್ಲೊಮಾ |
ವೇತನ | ಮಾಸಿಕ ₹ 40,000 |
ಉದ್ಯೋಗದ ಸ್ಥಳ | ನವದೆಹಲಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 3, 2023 |
ಇದನ್ನೂ ಓದಿ:CSB Recruitment 2023: ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರು ಈಗಲೇ ಅಪ್ಲೈ ಮಾಡಿ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 3, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ