DOT Recruitment 2023: ಟೆಲಿಕಮ್ಯುನಿಕೇಷನ್ ಡಿಪಾರ್ಟ್ಮೆಂಟ್(Department of Telecommunication) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 270 ಸಬ್ ಡಿವಿಶನಲ್ ಎಂಜಿನಿಯರ್(Sub Divisional Engineer) ಹುದ್ದೆಗಳು ಖಾಲಿ ಇವೆ. ಫೆಬ್ರವರಿ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಟೆಲಿಕಮ್ಯುನಿಕೇಷನ್ ಡಿಪಾರ್ಟ್ಮೆಂಟ್ |
ಹುದ್ದೆ | ಸಬ್ ಡಿವಿಶನಲ್ ಎಂಜಿನಿಯರ್ |
ಒಟ್ಟು ಹುದ್ದೆ | 270 |
ವೇತನ | ಮಾಸಿಕ ₹ 47,600-1,51,100 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆ ದಿನ | ಫೆಬ್ರವರಿ 22, 2023 |
ಇದನ್ನೂ ಓದಿ: ಬೆಂಗಳೂರಿನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 72,000 ಸಂಬಳ, ಡಿಗ್ರಿ ಆದವರು ಅಪ್ಲೈ ಮಾಡಿ
ವಿದ್ಯಾರ್ಹತೆ:
DOT ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಟೆಲಿ ಕಮ್ಯುನಿಕೇಶನ್/ಮಾಹಿತಿ ತಂತ್ರಜ್ಞಾನ/ಇನ್ಸ್ಟ್ರುಮೆಂಟೇಶನ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
DOT ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 22, 2023ಕ್ಕೆ ಗರಿಷ್ಠ 56 ವರ್ಷಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 47,600-1,51,100
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ADG 1 (A&HR)
DGT HQ
ಕೊಠಡಿ ಸಂಖ್ಯೆ 212
2 ನೇ ಮಹಡಿ
UIDAI ಕಟ್ಟಡ
ಕಾಳಿ ಮಂದಿರದ ಹಿಂದೆ
ನವದೆಹಲಿ - 110001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 22, 2023
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 011-23746146 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ