DRDO CABS Recruitment 2023: ಡಿಫೆನ್ಸ್ ರಿಸರ್ಚ್ & ಡೆವಲಪ್ಮೆಂಟ್ ಆರ್ಗನೈಜೇಶನ್, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ (Defence Research and Development Organisation, Centre for Air Borne Systems) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಿವಿಲಿಯನ್ ಮೆಡಿಕಲ್ ಆಫೀಸರ್ (Civilian Medical Officer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಮೇ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಡಿಫೆನ್ಸ್ ರಿಸರ್ಚ್ & ಡೆವಲಪ್ಮೆಂಟ್ ಆರ್ಗನೈಜೇಶನ್ |
ಹುದ್ದೆ | ಸಿವಿಲಿಯನ್ ಮೆಡಿಕಲ್ ಆಫೀಸರ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂಬಿಬಿಎಸ್ |
ವೇತನ | ಮಾಸಿಕ ₹ 55,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 7, 2023 |
ಇದನ್ನೂ ಓದಿ: NIT Karnatakaದಲ್ಲಿ ಕೆಲಸಕ್ಕೆ ಅಪ್ಲೈ ಮಾಡಿ- ತಿಂಗಳಿಗೆ ₹ 31,000 ಸಂಬಳ
ವಯೋಮಿತಿ:
ಡಿಫೆನ್ಸ್ ರಿಸರ್ಚ್ & ಡೆವಲಪ್ಮೆಂಟ್ ಆರ್ಗನೈಜೇಶನ್, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 65 ವರ್ಷದೊಳಗಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 55,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: BSNL Recruitment 2023: ಭಾರತ್ ಸಂಚಾರ್ ನಿಗಮದಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು
CABS
ವಿಂಡ್ ಟನಲ್ ರಸ್ತೆ
ಬೇಲೂರು
ಯೆಮ್ಲೂರು ಅಂಚೆ
ಬೆಂಗಳೂರು-560037
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 7, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ