EIL Recruitment 2023: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್(Engineers India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ಮ್ಯಾನೇಜ್ಮೆಂಟ್ ಟ್ರೈನಿ (Management Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಮ್ಯಾನೇಜ್ಮೆಂಟ್ ಟ್ರೈನಿ |
ಒಟ್ಟು ಹುದ್ದೆ | 42 |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ವೇತನ | ಮಾಸಿಕ ₹ 60,000-1,80,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 14, 2023 |
ಇದನ್ನೂ ಓದಿ: Spices Board Recruitment 2023: ಡಿಗ್ರಿ ಆಗಿದ್ರೆ ಬೆಂಗಳೂರಿನಲ್ಲಿದೆ ಬಂಪರ್ ಉದ್ಯೋಗ-ತಿಂಗಳಿಗೆ ₹ 60 ಸಾವಿರ ಸಂಬಳ
ವಿದ್ಯಾರ್ಹತೆ:
ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
PWD(OBC/NCL) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ವೇತನ:
ಮಾಸಿಕ ₹ 60,000-1,80,000
ಇದನ್ನೂ ಓದಿ: NIMHANS Recruitment 2023: ತಿಂಗಳಿಗೆ 67 ಸಾವಿರ ಸಂಬಳ- ಬೆಂಗಳೂರಿನಲ್ಲಿ ಕೆಲಸ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
GATE ಸ್ಕೋರ್
ಗ್ರೂಪ್ ಡಿಸ್ಕಸನ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 14, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ