EPFO Recruitment 2023: ನೌಕರರ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2859 ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 26, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನೌಕರರ ಭವಿಷ್ಯ ನಿಧಿ ಸಂಸ್ಥೆ |
ಹುದ್ದೆ | ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್, ಸ್ಟೆನೋಗ್ರಾಫರ್ |
ಒಟ್ಟು ಹುದ್ದೆ | 2859 |
ವಿದ್ಯಾರ್ಹತೆ | ಪಿಯುಸಿ, ಪದವಿ |
ವೇತನ | ಮಾಸಿಕ ₹ 29,200-92,300 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 26, 2023 (ನಾಳೆ) |
ಇದನ್ನೂ ಓದಿ:KMF Recruitment 2023: ಕೆಎಂಎಫ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಾಳೆಯೊಳಗೆ ಅರ್ಜಿ ಹಾಕಿ- ಬಂಪರ್ ಅವಕಾಶ
ವಿದ್ಯಾರ್ಹತೆ:
ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್- ಪದವಿ
ಸ್ಟೆನೋಗ್ರಾಫರ್- ಪಿಯುಸಿ
ವಯೋಮಿತಿ:
ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 26, 2023 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: KPSC Recruitment 2023: ಪಿಯುಸಿ ಪಾಸಾದವರಿಗೆ ಕೆಪಿಎಸ್ಸಿ ಉದ್ಯೋಗ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವೇತನ:
ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್- ಮಾಸಿಕ ₹ 29,200-92,300
ಸ್ಟೆನೋಗ್ರಾಫರ್- ಮಾಸಿಕ ₹ 25,500-81,100
ಅರ್ಜಿ ಶುಲ್ಕ:
SC/ST/PWBD/ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 700 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 26, 2023 (ನಾಳೆ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ