FPI Bangalore Recruitment 2023: ಬೆಂಗಳೂರಿನ ಹಣಕಾಸು ನೀತಿ(Fiscal Policy Institute Bangalore) ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಜೂನಿಯರ್ ಪ್ರೋಗ್ರಾಮರ್(Junior Programmer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಜನವರಿ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆ |
ಹುದ್ದೆ | ಜೂನಿಯರ್ ಪ್ರೋಗ್ರಾಮರ್ |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ಉದ್ಯೋಗದ ಸ್ಥಳ | ಬೆಂಗಳೂರು |
ವೇತನ | ಮಾಸಿಕ ₹ 50,000 |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಅರ್ಜಿ ಸಲ್ಲಿಸಲು ಕೊನೆ ದಿನ | ಜನವರಿ 27, 2023 |
ಇದನ್ನೂ ಓದಿ: Job Alert: ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ- ನಾಳೆಯೇ ಸಂದರ್ಶನ
ವಯೋಮಿತಿ:
ಹಣಕಾಸು ನೀತಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 12, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಹಣಕಾಸು ನೀತಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 50,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಹಣಕಾಸು ನೀತಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು
ಹಣಕಾಸು ನೀತಿ ಸಂಸ್ಥೆ
ಬೆಂಗಳೂರು- ಮೈಸೂರು ರಸ್ತೆ
ಕೆಂಗೇರಿ
ಬೆಂಗಳೂರು-560060
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 27, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ