OPSC Recruitment 2023: ಒಡಿಶಾ ಪಬ್ಲಿಕ್ ಸರ್ವಿಸ್ ಕಮಿಷನ್ (OPSC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 116 ಆಯುರ್ವೇದ ವೈದ್ಯಕೀಯ ಅಧಿಕಾರಿ (Ayurvedic Medical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಗ್ರೂಪ್ ಬಿ (Group B) ವರ್ಗದ ಅಡಿಯಲ್ಲಿ ಈ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last Date) ಜೂನ್ 8, 2023. ಅರ್ಜಿ ಪ್ರಕ್ರಿಯೆಯು ಮೇ 9, 2023 ರಂದು ಪ್ರಾರಂಭವಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಆಯುರ್ವೇದಿಕ್ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (BAMS) ಅಥವಾ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅದರ ಸಮಾನ ಪದವಿಯನ್ನು ಪಡೆದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ಅನುಭವ, ಆಯ್ಕೆ ಮಾನದಂಡ, ವಯೋಮಿತಿ, ವೇತನ ಮತ್ತು ಇತರೆ ವಿವರಗಳನ್ನು ಅಧಿಸೂಚನೆಯಲ್ಲಿ ನೋಡಬಹುದು. ಅಧಿಕೃತ ವೆಬ್‌ಸೈಟ್ https://www.opsc.gov.in/Public/OPSC/Default.aspx ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (BAMS) ಅಥವಾ ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್‌ನಿಂದ ಮಾನ್ಯತೆ ಪಡೆದ ಯಾವುದೇ ಶಾಲೆ ಅಥವಾ ಸಂಸ್ಥೆಯಿಂದ ಸಮಾನ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಒಡಿಶಾ ಸ್ಟೇಟ್ ಕೌನ್ಸಿಲ್ ಆಫ್ ಆಯುರ್ವೇದಿಕ್ ಮೆಡಿಸಿನ್ ಅಡಿಯಲ್ಲಿ ನೋಂದಾಯಿಸಿಕೊಂಡಿರಬೇಕು.
ಇದನ್ನೂ ಓದಿ: UPSC Recruitment 2023: ಡಿಪ್ಲೊಮಾ, ಎಂಜಿನಿಯರಿಂಗ್ ಆದವರಿಗೆ UPSC ಉದ್ಯೋಗ- ಈಗಲೇ ಅಪ್ಲೈ ಮಾಡಿ
ವಯೋಮಿತಿ:
ಆಯುರ್ವೇದಿಕ್ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 38 ವರ್ಷ ವಯೋಮಿತಿ ಇರಬೇಕು.
ಸಂಸ್ಥೆ | ಒಡಿಶಾ ಪಬ್ಲಿಕ್ ಸರ್ವಿಸ್ ಕಮಿಷನ್ |
ಹುದ್ದೆ | ಆಯುರ್ವೇದ ವೈದ್ಯಕೀಯ ಅಧಿಕಾರಿ |
ಒಟ್ಟು ಹುದ್ದೆ | 116 |
ವಿದ್ಯಾರ್ಹತೆ | BAMS |
ವೇತನ | ಮಾಸಿಕ ₹ 44,900 |
ಉದ್ಯೋಗದ ಸ್ಥಳ | ಒಡಿಶಾ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 8, 2023 |
ಇದನ್ನೂ ಓದಿ: JOBS: ಮೈಸೂರು ಜಿಲ್ಲಾ ಕೋರ್ಟ್ನಲ್ಲಿ 59 ಹುದ್ದೆಗಳಿಗೆ ಅರ್ಜಿ ಆಹ್ವಾನ- 10th, PU ಪಾಸಾಗಿದ್ರೆ 52 ಸಾವಿರ ಸಂಬಳ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 9, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 8, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ