• Home
  • »
  • News
  • »
  • jobs
  • »
  • HAL Recruitment 2022: ಬೆಂಗಳೂರಿನ HALನಲ್ಲಿ ಡಯೆಟಿಷಿಯನ್ ಹುದ್ದೆ ಖಾಲಿ ಇದೆ, ಈಗಲೇ Apply ಮಾಡಿ

HAL Recruitment 2022: ಬೆಂಗಳೂರಿನ HALನಲ್ಲಿ ಡಯೆಟಿಷಿಯನ್ ಹುದ್ದೆ ಖಾಲಿ ಇದೆ, ಈಗಲೇ Apply ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

    HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಡಯೆಟಿಷಿಯನ್(ಆಹಾರ ತಜ್ಞ) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
    ಹುದ್ದೆಡಯೆಟಿಷಿಯನ್
    ಒಟ್ಟು ಹುದ್ದೆ1
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳಬೆಂಗಳೂರು

    ವಿದ್ಯಾರ್ಹತೆ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: IIAP Recruitment 2022: ತಿಂಗಳಿಗೆ 40 ಸಾವಿರ ಸಂಬಳ-ಡಿಪ್ಲೋಮಾ ಆಗಿದ್ರೆ ಕೇಂದ್ರ ಸರ್ಕಾರದ ನೌಕರಿ


    ವಯೋಮಿತಿ:
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    ಚೀಫ್ ಮ್ಯಾನೇಜರ್ (HR)
    ಇಂಡಸ್ಟ್ರಿಯಲ್ ಹೆಲ್ತ್​ ಸೆಂಟರ್
    ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
    ಸುರಂಜನದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣದ ಹತ್ತಿರ)
    ಬೆಂಗಳೂರು-560017


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/12/2022
    ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022


    ಇದನ್ನೂ ಓದಿ: WAPCOS Recruitment 2022: ನಿಮ್ಮದು ಡಿಪ್ಲೋಮಾ, ಎಂಜಿನಿಯರಿಂಗ್ ಆಗಿದೆಯಾ? ಇಲ್ಲಿದೆ ನೋಡಿ ಬಂಪರ್ ಉದ್ಯೋಗ


    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328023 ಅಥವಾ ಇ-ಮೇಲ್ ಐಡಿ hr.medical@hal-india.co.in ಗೆ ಸಂಪರ್ಕಿಸಿ.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು