• Home
  • »
  • News
  • »
  • jobs
  • »
  • SSLC, PUC ಪಾಸಾಗಿದ್ರೆ ತುಮಕೂರಿನಲ್ಲಿದೆ ಸರ್ಕಾರಿ ನೌಕರಿ- ಇಲ್ಲಿ ಅಪ್ಲೈ ಮಾಡಿ

SSLC, PUC ಪಾಸಾಗಿದ್ರೆ ತುಮಕೂರಿನಲ್ಲಿದೆ ಸರ್ಕಾರಿ ನೌಕರಿ- ಇಲ್ಲಿ ಅಪ್ಲೈ ಮಾಡಿ

HAL

HAL

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಫೈಯರ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,000 ರೂ. ಸಂಬಳ ನೀಡಲಾಗುತ್ತದೆ.

  • Share this:

HAL Recruitment 2023: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಫೈಯರ್ ಮ್ಯಾನ್(Fire Man) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್ hal-india.co.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಫೈಯರ್ ಮ್ಯಾನ್
ಒಟ್ಟು ಹುದ್ದೆ10
ವಿದ್ಯಾರ್ಹತೆ10th, ಪಿಯುಸಿ
ವೇತನತಿಂಗಳಿಗೆ 21,000
ಉದ್ಯೋಗದ ಸ್ಥಳತುಮಕೂರು
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ


ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Post Office Jobs: ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳ ನೇಮಕಾತಿ-10th, PU ಪಾಸಾದವರು ಅಪ್ಲೈ ಮಾಡಿ


ವೇತನ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಫೈಯರ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,000 ರೂ. ಸಂಬಳ ನೀಡಲಾಗುತ್ತದೆ.


ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ


ಇದನ್ನೂ ಓದಿ: BSNL Recruitment 2023: 11 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BSNL- ತಿಂಗಳಿಗೆ 40,000 ಸಂಬಳ


ಉದ್ಯೋಗದ ಸ್ಥಳ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಫೈಯರ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ಕೊಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ದೈಹಿಕ ಪರೀಕ್ಷೆ
ಲಿಖಿತ ಪರೀಕ್ಷೆ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 15, 2023
ದೈಹಿಕ ಪರೀಕ್ಷೆ ನಡೆಯುವ ದಿನ: ಜನವರಿ 27, 2023
ಲಿಖಿತ ಪರೀಕ್ಷೆ ನಡೆಯುವ ದಿನ: ಜನವರಿ 29, 2023

Published by:Latha CG
First published: