HMT Machine Tools Limited Recruitment 2023: HMT ಮೆಷಿನ್ ಟೂಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಗ್ರಾಜುಯೇಟ್ & ಡಿಪ್ಲೊಮಾ ಅಪ್ರೆಂಟಿಸ್ (Graduate & Diploma Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ (Job) ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ತಮ್ಮ ರೆಸ್ಯೂಮ್ (Resume) ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | HMT ಮೆಷಿನ್ ಟೂಲ್ಸ್ ಲಿಮಿಟೆಡ್ |
ಹುದ್ದೆ | ಗ್ರಾಜುಯೇಟ್ & ಡಿಪ್ಲೊಮಾ ಅಪ್ರೆಂಟಿಸ್ |
ಒಟ್ಟು ಹುದ್ದೆ | 40 |
ವಿದ್ಯಾರ್ಹತೆ | ಡಿಪ್ಲೊಮಾ, ಎಂಜಿನಿಯರಿಂಗ್ |
ವೇತನ | ಮಾಸಿಕ ₹ 8,000-9,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023 |
ಇದನ್ನೂ ಓದಿ: Big Bazaar Jobs: ಬಿಗ್ ಬಜಾರ್ನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 48,000 ಸಂಬಳ
ವಿದ್ಯಾರ್ಹತೆ:
ಡಿಪ್ಲೊಮಾ ಅಪ್ರೆಂಟಿಸ್- ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ಗ್ರಾಜುಯೇಟ್ ಅಪ್ರೆಂಟಿಸ್- ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ವಯೋಮಿತಿ:
HMT ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಇರಬೇಕು. ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಡಿಪ್ಲೊಮಾ ಅಪ್ರೆಂಟಿಸ್- ಮಾಸಿಕ ₹ 8,000
ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ ₹ 9,000
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ mbxtrg@hmtmachinetools.com ಗೆ ಫೆಬ್ರವರಿ 28, 2023ಕ್ಕೆ ಮುನ್ನ ಕಳುಹಿಸಬೇಕು.
ಇದನ್ನೂ ಓದಿ: Railway Jobs: 10th ಪಾಸಾಗಿದ್ರೆ ರೈಲ್ ಕೋಚ್ ಫ್ಯಾಕ್ಟರಿಯಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 28, 2023
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ನಂಬರ್-9880234325 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ