ಡಿಪ್ಲೋಮಾ ಅಥವಾ ಯಾವುದೇ ಪದವಿ (Degree) ಮುಗಿಸಿ ಬಹಳ ದಿನಗಳಿಂದ ಕೆಲಸ (Job) ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (Quality Council of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪುಣೆ, ಬೆಂಗಳೂರು, ದೆಹಲಿ, ಡೆಹ್ರಾಡೂನ್ನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ನಾವು ನೀಡಿರುವ ಇ-ಮೇಲ್ ಮೂಲಕ ಅರ್ಜಿ ಹಾಕಬಹುದಾಗಿದೆ. ಮೌಲ್ಯಮಾಪಕರ ಪೋಸ್ಟ್‌ಗಳನ್ನು ಭರ್ತಿ ಮಾಡಲು ಈ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಅನ್ನು 30-03-2023 ರ ಮೊದಲು ಅರ್ಜಿ ಕಳುಹಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ವೇತನ, ವಯೋಮಿತಿ ಸೇರಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಯ ಮಾಹಿತಿ
ಸಂಸ್ಥೆಯ ಹೆಸರು | ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) |
ಉದ್ಯೋಗ ಸ್ಥಳ | ದೆಹಲಿ - ಡೆಹ್ರಾಡೂನ್ - ಪುಣೆ - ಬೆಂಗಳೂರು |
ಪೋಸ್ಟ್ ಹೆಸರು | ಮೌಲ್ಯಮಾಪಕ |
ಸಂಬಳ | QCI ನಿಯಮಗಳ ಪ್ರಕಾರ |
ಶೈಕ್ಷಣಿಕ ಅರ್ಹತೆ | ಡಿಪ್ಲೊಮಾ, ಪದವಿ |
ವಯಸ್ಸಿನ ಮಿತಿ | ಕ್ಯೂಸಿಐ ನಿಯಮಗಳ ಪ್ರಕಾರ |
ಅರ್ಜಿ ಸಲ್ಲಿಕೆ ಹೇಗೆ | ಇ-ಮೇಲ್ |
ಅರ್ಜಿ ಕಳುಹಿಸುವ ಐಡಿ | samar@qcin.org |
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ | 30-03-2023 |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಶೈಕ್ಷಣಿಕ ಅರ್ಹತೆ: QCI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕ್ಯೂಸಿಐ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ: ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅನುಭವ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, samar@qcin.org ಗೆ 30-03-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಇದನ್ನೂ ಓದಿ: ಪದವೀಧರರಿಗೆ ಭರ್ಜರಿ ಉದ್ಯೋಗಾವಕಾಶ; ತಿಂಗಳಿಗೆ 1.12 ಲಕ್ಷ ರೂ. ಸಂಬಳ
ಪ್ರಮುಖ ದಿನಾಂಕಗಳು:
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30-03-2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ