IAF Recruitment 2023: ಭಾರತೀಯ ವಾಯುಪಡೆ (Indian Air Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ವಾಯು (Agniveer Vayu) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಾಯುಪಡೆ |
ಹುದ್ದೆ | ಅಗ್ನಿವೀರ್ ವಾಯು |
ವಿದ್ಯಾರ್ಹತೆ | ಪಿಯುಸಿ, ಡಿಪ್ಲೊಮಾ |
ವಯೋಮಿತಿ | 21 ವರ್ಷ |
ವೇತನ | ಮಾಸಿಕ ₹ 30,000- 40,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 31, 2023 |
ಇದನ್ನೂ ಓದಿ: Government Job: ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಈಗಲೇ ಅರ್ಜಿ ಹಾಕಿ
ವಯೋಮಿತಿ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 30,000- 40,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 250 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು. ಆನ್ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ:
ಫಿಜಿಸಿಯನ್ ಫಿಟ್ನೆಸ್ ಟೆಸ್ಟ್
ಅಡಾಪ್ಟಬಿಲಿಟಿ ಟೆಸ್ಟ್
ಮೆಡಿಕಲ್ ಪರೀಕ್ಷೆ
ಆನ್ಲೈನ್ ಟೆಸ್ಟ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2023
ಆನ್ಲೈನ್ ಟೆಸ್ಟ್ ನಡೆಯುವ ದಿನ: ಮೇ 20, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 020-25503105/25503106 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ