ICMR Recruitment 2023: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (Indian Council of Medical Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಡ್ಮಿನಿಸ್ಟ್ರೇಟಿವ್ ಆಫೀಸರ್ (Administrative Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 28, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ |
ಹುದ್ದೆ | ಅಡ್ಮಿನಿಸ್ಟ್ರೇಟಿವ್ ಆಫೀಸರ್ |
ಒಟ್ಟು ಹುದ್ದೆ | 11 |
ವೇತನ | ಮಾಸಿಕ ₹ 56,100- 1,77,500 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 28, 2023 (ಇಂದು) |
ಇದನ್ನೂ ಓದಿ: Private Jobs: ಪೂರ್ವಿಕಾ ಮೊಬೈಲ್ಸ್ನಲ್ಲಿ PU ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 25,000 ಸಂಬಳ
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ:
ಮಾಸಿಕ ₹ 56,100- 1,77,500 ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ತೆಲಂಗಾಣ, ಉತ್ತರ ಪ್ರದೇಶ, ಅಸ್ಸಾಂ, ಕರ್ನಾಟಕ
ಇದನ್ನೂ ಓದಿ: AAI Recruitment 2023: ಕರ್ನಾಟಕದಲ್ಲಿ ಏರ್ಪೋರ್ಟ್ ಜಾಬ್ ಖಾಲಿ ಇದೆ- ತಿಂಗಳಿಗೆ 75 ಸಾವಿರ ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್
ರಾಮಲಿಂಗಸ್ವಾಮಿ ಭವನ
ನವದೆಹಲಿ - 110029
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 28, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ