• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಡಿಪ್ಲೊಮಾ ಆಗಿದ್ರೆ 55,000 ಸಂಬಳ- ಬೆಂಗಳೂರಿನಲ್ಲಿದೆ ಬಂಪರ್ ಉದ್ಯೋಗ

JOBS: ಡಿಪ್ಲೊಮಾ ಆಗಿದ್ರೆ 55,000 ಸಂಬಳ- ಬೆಂಗಳೂರಿನಲ್ಲಿದೆ ಬಂಪರ್ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಫೆಬ್ರವರಿ 23, 2023 ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ICTS Recruitment 2023: ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ(International Centre for Theoretical Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಒಂದು ಪ್ರಾಜೆಕ್ಟ್​ ಜೂನಿಯರ್ ಎಂಜಿನಿಯರ್-ಬಿ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಫೆಬ್ರವರಿ 23, 2023 ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ
ಹುದ್ದೆಪ್ರಾಜೆಕ್ಟ್​ ಜೂನಿಯರ್ ಎಂಜಿನಿಯರ್-ಬಿ
ಒಟ್ಟು ಹುದ್ದೆ1
ವಿದ್ಯಾರ್ಹತೆಡಿಪ್ಲೊಮಾ
ವೇತನಮಾಸಿಕ 55,600 ರೂ.
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 23, 2023

ಶೈಕ್ಷಣಿಕ ಅರ್ಹತೆ:
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: IISc Bangaloreನಲ್ಲಿ ಪದವೀಧರರಿಗೆ ಜಾಬ್ ಆಫರ್- ತಿಂಗಳಿಗೆ ₹ 78,000 ಸಂಬಳ


ವೇತನ:
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರದ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 55,600 ರೂ. ವೇತನ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/02/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 23, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು