IGI Aviation Recruitment 2023: IGI ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1086 ಕಸ್ಟಮರ್ ಸರ್ವೀಸ್ ಏಜೆಂಟ್ (Customer Service Agent) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಸೆಕೆಂಡ್ ಪಿಯುಸಿ (2nd PUC) ಪಾಸಾಗಿದ್ರೆ ಸಾಕು ಈ ಉದ್ಯೋಗ ನಿಮ್ಮದಾಗುತ್ತೆ, ತಡಮಾಡದೇ ಈಗಲೇ ಅಪ್ಲೈ ಮಾಡಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವೇತನ:
ಮಾಸಿಕ ₹ 25,000-35,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಇದನ್ನೂ ಓದಿ:ISRO Recruitment 2023: ಇಸ್ರೋದಲ್ಲಿ 10th, ITI ಪಾಸಾದವರಿಗೆ ಬಂಪರ್ ಉದ್ಯೋಗ- 81 ಸಾವಿರ ಸಂಬಳ
ಶೈಕ್ಷಣಿಕ ಅರ್ಹತೆ:
IGI ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪಾಸಾಗಿರಬೇಕು.
ಸಂಸ್ಥೆ | IGI ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ |
ಹುದ್ದೆ | ಕಸ್ಟಮರ್ ಸರ್ವೀಸ್ ಏಜೆಂಟ್ |
ಒಟ್ಟು ಹುದ್ದೆ | 1086 |
ವಿದ್ಯಾರ್ಹತೆ | ಪಿಯುಸಿ |
ವೇತನ | ಮಾಸಿಕ ₹ 25,000-35,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 12, 2023 |
ಇದನ್ನೂ ಓದಿ:SAI Recruitment 2023: ಬೆಂಗಳೂರಿನಲ್ಲಿ ಕೇಟರಿಂಗ್ ಮ್ಯಾನೇಜರ್ ಹುದ್ದೆ ಖಾಲಿ ಇದೆ- ತಿಂಗಳಿಗೆ 50 ಸಾವಿರ ಸಂಬಳ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 350 ರೂ. ಪರೀಕ್ಷಾ ಶುಲ್ಕ ಕಟ್ಟಬೇಕು.
ಪಾವತಿಸುವ ಬಗೆ - ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ