IGNCA Recruitment 2023: ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ (Indira Gandhi National Centre For Arts) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 PS ಟು ರೀಜನಲ್ ಡೈರೆಕ್ಟರ್(Regional Director) ಹುದ್ದೆ ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಹಾಕಲು ಇದೇ ಜನವರಿ 21, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ |
ಹುದ್ದೆ | ರೀಜನಲ್ ಡೈರೆಕ್ಟರ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 20,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: ISRO Recruitment 2023: ಇಸ್ರೋದಲ್ಲಿ 526 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ವಯೋಮಿತಿ:
ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 21, 2023
ಇದನ್ನೂ ಓದಿ: ಜವಳಿ ಸಚಿವಾಲಯದಲ್ಲಿ 10th ಪಾಸಾದವರಿಗೆ ಬಂಪರ್ ಉದ್ಯೋಗ-ಈಗಲೇ ಅರ್ಜಿ ಹಾಕಿ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 21 ಕ್ಕೆ ಮುನ್ನ ಕಳುಹಿಸಬೇಕು.
ಪ್ರಾದೇಶಿಕ ನಿರ್ದೇಶಕರು
ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್
ಪ್ರಾದೇಶಿಕ ಕೇಂದ್ರ
ಕೆಂಗುಂಟೆ ಸರ್ಕಲ್
ಮಲ್ಲತ್ತಹಳ್ಳಿ
ಜ್ಞಾನಭಾರತಿ ಅಂಚೆ
ಬೆಂಗಳೂರು - 560056
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ