• Home
  • »
  • News
  • »
  • jobs
  • »
  • IIAP Recruitment 2022: ತಿಂಗಳಿಗೆ 40 ಸಾವಿರ ಸಂಬಳ-ಡಿಪ್ಲೋಮಾ ಆಗಿದ್ರೆ ಕೇಂದ್ರ ಸರ್ಕಾರದ ನೌಕರಿ

IIAP Recruitment 2022: ತಿಂಗಳಿಗೆ 40 ಸಾವಿರ ಸಂಬಳ-ಡಿಪ್ಲೋಮಾ ಆಗಿದ್ರೆ ಕೇಂದ್ರ ಸರ್ಕಾರದ ನೌಕರಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27,2022ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.

  • Share this:

    IIAP Recruitment 2022: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಟ್ ಎಂಜಿನಿಯರ್(Site Engineer) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ, ಮೈಸೂರು, ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 27, 2022 ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್
    ಹುದ್ದೆಸೈಟ್ ಎಂಜಿನಿಯರ್
    ಒಟ್ಟು ಹುದ್ದೆ1
    ವೇತನಮಾಸಿಕ ₹ 40,000
    ಉದ್ಯೋಗದ ಸ್ಥಳಮೈಸೂರು, ಬೆಂಗಳೂರು


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27,2022ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.


    ಇದನ್ನೂ ಓದಿ: CFTRI Recruitment 2022: M.Sc ಆಗಿದ್ರೆ ಮೈಸೂರಿನ CFTRIನಲ್ಲಿದೆ ಉದ್ಯೋಗಾವಕಾಶ, ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 02/12/2022
    ಸಂದರ್ಶನ ನಡೆಯುವ ದಿನಾಂಕ: 27/12/2022


    ಸಂದರ್ಶನ ನಡೆಯುವ ಸ್ಥಳ
    ಇನ್​ಸ್ಟಿಟ್ಯೂಟ್ ಕ್ಯಾಂಪಸ್
    2nd ಬ್ಲಾಕ್
    ಕೋರಮಂಗಲ
    ಸರ್ಜಾಪುರ ರಸ್ತೆ
    ಬೆಂಗಳೂರು-560034

    Published by:Latha CG
    First published: