IIAP Recruitment 2023: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಎಂಜಿನಿಯರ್ ಟ್ರೈನಿ(ಐಟಿ ಸಪೋರ್ಟ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 17, 2023ರಂದು ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ |
ಹುದ್ದೆ | ಎಂಜಿನಿಯರ್ ಟ್ರೈನಿ |
ಒಟ್ಟು ಹುದ್ದೆ | 2 |
ವೇತನ | ಮಾಸಿಕ 30,000 |
ಉದ್ಯೋಗದ ಸ್ಥಳ | ಬೆಂಗಳೂರು |
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 17, 2023ಕ್ಕೆ ಗರಿಷ್ಠ 26 ವರ್ಷ ಮೀರಿರಬಾರದು.
ಇದನ್ನೂ ಓದಿ: ಡಿಗ್ರಿ ಆಗಿದ್ರೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿದೆ ಉದ್ಯೋಗ-ತಿಂಗಳಿಗೆ 60,000 ಸಂಬಳ
ವೇತನ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30,000 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತೆ.
ಜನವರಿ 17, 2023ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಪಾಸ್ಪೋರ್ಟ್ ಅಳತೆಯ ಫೋಟೋ, ಎಲ್ಲಾ ದಾಖಲಾತಿಗಳ ಮೂಲ ಪ್ರತಿಗಳು, ಶೈಕ್ಷಣಿಕ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ತಂದಿರಬೇಕು.
ಸಂದರ್ಶನ ನಡೆಯುವ ಸ್ಥಳ:
ಇನ್ಸ್ಟಿಟ್ಯೂಟ್ ಕ್ಯಾಂಪಸ್
2ನೇ ಬ್ಲಾಕ್
ಕೋರಮಂಗಲ
ಸರ್ಜಾಪುರ ರಸ್ತೆ
ಬೆಂಗಳೂರು-560034
ಇದನ್ನೂ ಓದಿ: NHM Recruitment 2022: ರಾಷ್ಟ್ರೀಯ ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/12/2022
ಸಂದರ್ಶನ ನಡೆಯುವ ದಿನಾಂಕ: 17/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ