• Home
  • »
  • News
  • »
  • jobs
  • »
  • JOBS: ಬೆಂಗಳೂರಿನಲ್ಲಿ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ ₹ 60,000 ಸಂಬಳ

JOBS: ಬೆಂಗಳೂರಿನಲ್ಲಿ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ ₹ 60,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್​ ಸೈನ್ಸ್​ ಇಂಜಿನಿಯರಿಂಗ್‌ನಲ್ಲಿ ಶೇ.60ರಷ್ಟು ಅಂಕಗಳೊಂದಿಗೆ B.E/ B. Tech ಉತ್ತೀರ್ಣರಾಗಿರಬೇಕು.

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

IIAP Recruitment 2023: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಎಂಜಿನಿಯರ್-1 (Project Engineer) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 6ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್
ಹುದ್ದೆಪ್ರಾಜೆಕ್ಟ್​ ಎಂಜಿನಿಯರ್-1
ಒಟ್ಟು ಹುದ್ದೆ1
ವೇತನಮಾಸಿಕ ₹ 60,000
ಉದ್ಯೋಗದ ಸ್ಥಳಬೆಂಗಳೂರು


ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್​ ಸೈನ್ಸ್​ ಇಂಜಿನಿಯರಿಂಗ್‌ನಲ್ಲಿ ಶೇ.60ರಷ್ಟು ಅಂಕಗಳೊಂದಿಗೆ B.E/ B. Tech ಉತ್ತೀರ್ಣರಾಗಿರಬೇಕು.


ಇದನ್ನೂ ಓದಿ: KSRLPS ನೇಮಕಾತಿ 2023: ಮಂಡ್ಯ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಯೋಮಿತಿ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 6, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/01/2023
ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 6, 2023


ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ iiap.res.in ಗೆ ಭೇಟಿ ನೀಡಿ.


ವೇತನ:
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 60,000 ವೇತನ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: Job Alert: ಕೊಪ್ಪಳ ಜಿ.ಪಂ.ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಾಳೆಯೊಳಗೆ ಅಪ್ಲೈ ಮಾಡಿ- ನೇರ ನೇಮಕಾತಿ


ಸಂದರ್ಶನ ನಡೆಯುವ ಸ್ಥಳ:
ಇನ್ಸ್ಟಿಟ್ಯೂಟ್ ಕ್ಯಾಂಪಸ್
2 ನೇ ಬ್ಲಾಕ್
ಕೋರಮಂಗಲ
ಸರ್ಜಾಪುರ ರಸ್ತೆ
ಬೆಂಗಳೂರು - 560034

Published by:Latha CG
First published: