IIIT Bangalore Recruitment 2023: ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ರಿಸರ್ಚ್ ಅಸೋಸಿಯೇಟ್ (Research Associate) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು |
ಹುದ್ದೆ | ರಿಸರ್ಚ್ ಅಸೋಸಿಯೇಟ್ |
ವಿದ್ಯಾರ್ಹತೆ | ಎಂಇ/ ಎಂ.ಟೆಕ್ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 7, 2023 |
ಇದನ್ನೂ ಓದಿ: KMF Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಎಂಎಫ್ - ಆಸಕ್ತರು ಇಲ್ಲಿ ಅಪ್ಲೈ ಮಾಡಿ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 7, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ