IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಯಲ್ಲಿ ಒಟ್ಟು 76 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್(ಗ್ರೂಪ್ ಸಿ) ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ(Bengaluru) ವೃತ್ತಿ ಮಾಡ ಬಯಸುವವರು ಹಾಗೂ ಪದವಿ(Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಜನವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಜ್ಞಾನ ಸಂಸ್ಥೆ |
ಹುದ್ದೆ | ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್(ಗ್ರೂಪ್ ಸಿ) |
ಒಟ್ಟು ಹುದ್ದೆ | 76 |
ವೇತನ | ಮಾಸಿಕ 21,700-69,100 |
ಉದ್ಯೋಗದ ಸ್ಥಳ | ಬೆಂಗಳೂರು |
ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 26 ವರ್ಷ ಮೀರಿರಬಾರದು.
ಇದನ್ನೂ ಓದಿ: IIAP Recruitment 2023: ಎಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಜ.17ಕ್ಕೆ ಸಂದರ್ಶನ- ಬೆಂಗಳೂರಿನಲ್ಲಿ ಕೆಲಸ
ಅರ್ಜಿ ಶುಲ್ಕ:
SC/ST/PWD/ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ 50 ರೂ.
ಜನರಲ್ ಅಭ್ಯರ್ಥಿಗಳಿಗೆ- 500 ರೂ.
ಶುಲ್ಕ ಪಾವತಿಸುವ ಬಗೆ-ಆನ್ಲೈನ್
ವೇತನ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700-69,100 ರೂ. ವೇತನ ನೀಡಲಾಗುತ್ತದೆ.
ರಿಜಿಸ್ಟರ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಲಾಗಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 06/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ