• Home
  • »
  • News
  • »
  • jobs
  • »
  • ಬೆಂಗಳೂರಿನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 72,000 ಸಂಬಳ, ಡಿಗ್ರಿ ಆದವರು ಅಪ್ಲೈ ಮಾಡಿ

ಬೆಂಗಳೂರಿನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 72,000 ಸಂಬಳ, ಡಿಗ್ರಿ ಆದವರು ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜನವರಿ 16, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 EHS ಆಫೀಸರ್​/ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಬೆಂಗಳೂರಿ(Bengaluru)ನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಜನವರಿ 16, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
ಹುದ್ದೆEHS ಆಫೀಸರ್​/ ಮ್ಯಾನೇಜರ್
ಒಟ್ಟು ಹುದ್ದೆ2
ವೇತನಮಾಸಿಕ ₹ 35,000-72,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಜನವರಿ 16, 2023

ವಿದ್ಯಾರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOBS: ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಆಸಕ್ತರು ಅಪ್ಲೈ ಮಾಡಿ


ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.




ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 16, 2023

Published by:Latha CG
First published: