Income Tax Department Recruitment 2023: ಆದಾಯ ತೆರಿಗೆ ಇಲಾಖೆಯು(Income Tax Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 72 ಆದಾಯ ತೆರಿಗೆ ಇನ್ಸ್ಪೆಕ್ಟರ್(Income Tax Inspector), ತೆರಿಗೆ ಸಹಾಯಕ(Tax Assistant), ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಆದಾಯ ತೆರಿಗೆ ಇಲಾಖೆ |
ಹುದ್ದೆ | ಆದಾಯ ತೆರಿಗೆ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್ |
ಒಟ್ಟು ಹುದ್ದೆ | 72 |
ವೇತನ | ಮಾಸಿಕ ₹ 34,800 |
ಉದ್ಯೋಗದ ಸ್ಥಳ | ಪಾಂಡಿಚೇರಿ, ತಮಿಳುನಾಡು |
ಇದನ್ನೂ ಓದಿ: ತಿಂಗಳಿಗೆ 50,000 ಸಂಬಳ- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಆದಾಯ ತೆರಿಗೆ ಇನ್ಸ್ಪೆಕ್ಟರ್- ಪದವಿ
ತೆರಿಗೆ ಸಹಾಯಕ- ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- 10ನೇ ತರಗತಿ
ವಯೋಮಿತಿ:
ಆದಾಯ ತೆರಿಗೆ ಇನ್ಸ್ಪೆಕ್ಟರ್- 18 ರಿಂದ 30 ವರ್ಷ
ತೆರಿಗೆ ಸಹಾಯಕ- 18 ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- 18 ರಿಂದ 27 ವರ್ಷ
ವಯೋಮಿತಿ ಸಡಿಲಿಕೆ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು- 5 ವರ್ಷ
SC/ST ಅಭ್ಯರ್ಥಿಗಳು- 10 ವರ್ಷ
ವೇತನ:
ಆದಾಯ ತೆರಿಗೆ ಇನ್ಸ್ಪೆಕ್ಟರ್- ಮಾಸಿಕ ₹ 9,300-34,800
ತೆರಿಗೆ ಸಹಾಯಕ- ಮಾಸಿಕ ₹ 5,200-20,200
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- ಮಾಸಿಕ ₹ 5,200-20,200
ಇದನ್ನೂ ಓದಿ: ಕೊಡಗು ಜಿ.ಪಂ.ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಯಾವುದೇ ಪರೀಕ್ಷೆ, ಸಂದರ್ಶನ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 06/02/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ