India Post Recruitment 2023: ಭಾರತೀಯ ಅಂಚೆ ಇಲಾಖೆ(Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12,828 ಪೋಸ್ಟ್ ಆಫೀಸ್ ಹುದ್ದೆಗಳು(Post Office Jobs) ಖಾಲಿ ಇವೆ. ಹೀಗಾಗಿ ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಿ. ಅಂಚೆ ಇಲಾಖೆಯಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟಲ್ಡ್ ಎಂದೇ ಅರ್ಥ. ಹೀಗಾಗಿ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಒಟ್ಟು 12,828 ಗ್ರಾಮೀಣ ಡಾಕ್ ಸೇವಕ್ (GDS- BPM/ABPM) ಹುದ್ದೆಗಳು ಖಾಲಿ ಇವೆ ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅರ್ಜಿ ಹಾಕಲು ಮುಂದಿನ ತಿಂಗಳು ಜೂನ್ 11, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಅಂಚೆ ಇಲಾಖೆ |
ಹುದ್ದೆ | ಗ್ರಾಮೀಣ ಡಾಕ್ ಸೇವಕ್ |
ಒಟ್ಟು ಹುದ್ದೆ | 12,828 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹12,000-29,380 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 11, 2023 |
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 11, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ಇದನ್ನೂ ಓದಿ: Job Alert: ಭಾರತ್ ಡೈನಾಮಿಕ್ಸ್ ಲಿಮಿಟೆಡ್ನಲ್ಲಿ 100 ಹುದ್ದೆಗಳು ಖಾಲಿ- ಬೆಂಗಳೂರಿನಲ್ಲಿ ಪೋಸ್ಟಿಂಗ್
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ಅರ್ಜಿ ಶುಲ್ಕ:
ಮಹಿಳಾ/ SC/ST/PwD & ತೃತೀಯ ಲಿಂಗಿ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: JOBS: ಉಡುಪಿಯಲ್ಲಿ PU ಆದವರಿಗೆ ಕೆಲಸ ಇದೆ- ತಿಂಗಳಿಗೆ 25,000 ಸಂಬಳ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
ಸಂದರ್ಶನ
ವೇತನ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ಮಾಸ್ಟರ್)- ಮಾಸಿಕ ₹ 12,000- 29,380
ಗ್ರಾಮೀಣ ಡಾಕ್ ಸೇವಕ್ (ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್)- ಮಾಸಿಕ ₹ 10,000 24,470
Gramin-Dak-Sevak-Posts-Advt-Details-India-Post- ನೋಟಿಫಿಕೇಶನ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 11, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ