Indian Army Recruitment 2023: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್ನ್ಯೂಸ್ (Good News) ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ (Technical Graduate Course) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ತಡಮಾಡದೇ ಆನ್ಲೈನ್ (Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಸೇನೆ |
ಹುದ್ದೆ | ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ |
ಒಟ್ಟು ಹುದ್ದೆ | 40 |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ವೇತನ | ಮಾಸಿಕ ₹ 225000/- |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 17, 2023 |
ಇದನ್ನೂ ಓದಿ: Union Bank Recruitment 2023: ಡಿಗ್ರಿ ಪಾಸಾದವ್ರಿಗೆ ಯೂನಿಯನ್ ಬ್ಯಾಂಕ್ನಲ್ಲಿ ಕೆಲಸ ಇದೆ- ತಿಂಗಳಿಗೆ 47 ಸಾವಿರ ಸಂಬಳ
ವಿದ್ಯಾರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಮೆರಿಟ್ ಲಿಸ್ಟ್
ಸಂದರ್ಶನ
ಇದನ್ನೂ ಓದಿ: Bengaluru Metro Recruitment 2023: ತಿಂಗಳಿಗೆ 60 ಸಾವಿರ ಸಂಬಳ- ಮೆಟ್ರೋ ಹುದ್ದೆಗಳಿಗೆ ನಾಳೆಯೊಳಗೆ ಅಪ್ಲೈ ಮಾಡಿ
ವೇತನ:
ಲೆಫ್ಟಿನೆಂಟ್- ರೂ.56100-177500/-
ಕ್ಯಾಪ್ಟನ್ -ರೂ.61300-193900/-
ಮೇಜರ್-ರೂ.69400-207200/-
ಲೆಫ್ಟಿನೆಂಟ್ ಕರ್ನಲ್- ರೂ.121200-212400/-
ಕರ್ನಲ್ - ರೂ.130600-215900/-
ಬ್ರಿಗೇಡಿಯರ್- ರೂ.139600-217600/-
ಮೇಜರ್ ಜನರಲ್ -ರೂ.144200-218200/-
ಲೆಫ್ಟಿನೆಂಟ್ ಜನರಲ್ HAG ಸ್ಕೇಲ್ - ರೂ.182200-224100/-
ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್- ರೂ.205400-224400/-
VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ (NFSG) -ರೂ.225000/-
COAS -ರೂ.2,50,000/-
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 17, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ