Indian Navy Recruitment 2023: ಭಾರತೀಯ ನೌಕಾದಳದಲ್ಲಿ (Indian Navy) ಅನೇಕ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಅಗ್ನಿವೀರ್ (MR) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಮೇ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ನೌಕಾದಳ |
ಹುದ್ದೆಯ ಹೆಸರು | ಅಗ್ನಿವೀರ್ (MR) |
ಒಟ್ಟು ಹುದ್ದೆಗಳು | 100 |
ವಿದ್ಯಾರ್ಹತೆ | 10ನೇ ತರಗತಿ |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ವೇತನ | ಮಾಸಿಕ ₹ 30,000 |
ಅರ್ಜಿ ಸಲ್ಲಿಕೆ ವಿಧಾನ | ಆನ್ ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 29/05/2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜೂನ್ 15, 2023 |
ವಯೋಮಿತಿ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 1, 2002 ರಿಂದ ಏಪ್ರಿಲ್ 30, 2006 ರೊಳಗೆ ಜನಿಸಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಇದನ್ನೂ ಓದಿ: TRIFED Recruitment 2023: ಸರ್ಕಾರಿ ನೌಕರಿ ಬೇಕಾ? ಇಲ್ಲಿದೆ ನೋಡಿ ಅವಕಾಶ- ನಾಳೆಯೇ ಲಾಸ್ಟ್ಡೇಟ್
ವೇತನ:
ಮಾಸಿಕ ₹ 30,000
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 550 ರೂ. ಪರೀಕ್ಷಾ ಶುಲ್ಕ ಕಟ್ಟಬೇಕು. ಆನ್ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪಿಎಫ್ಟಿ
ನೇಮಕಾತಿ ವೈದ್ಯಕೀಯ ಪರೀಕ್ಷೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 15, 2023
ಟ್ರೈನಿಂಗ್ ಶುರುವಾಗುವ ದಿನಾಂಕ: ನವೆಂಬರ್, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ