Indian Navy Recruitment 2023: ಭಾರತೀಯ ನೌಕಾಪಡೆ(Indian Navy) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 70 SSC ಎಕ್ಸಿಕ್ಯೂಟಿವ್(IT) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ(Central Government Jobs) ಅರಸುತ್ತಿರುವವರು ಹಾಗೂ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಬಯಸುತ್ತಿರುವವರು ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಡಿಗ್ರಿ ಪಾಸಾದವರಿಗೆ ಇದು ಸುವರ್ಣಾವಕಾಶವಾಗಿದೆ. ಫೆಬ್ರವರಿ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ.
ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಕೆಲಸ ಅರಸುತ್ತಿರುವ ಉದ್ಯೋಗಾಂಕ್ಷಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ನೌಕಾಪಡೆ |
ಹುದ್ದೆ | SSC ಎಕ್ಸಿಕ್ಯೂಟಿವ್(IT) |
ಒಟ್ಟು ಹುದ್ದೆ | 70 |
ವಿದ್ಯಾರ್ಹತೆ | ಬಿಎಸ್ಸಿ, ಬಿಸಿಎ, ಬಿಇ/ ಬಿ.ಟೆಕ್, ಎಂ.ಟೆಕ್ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 5, 2023 |
ವಯೋಮಿತಿ:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಜುಲೈ 2, 1998 ರಿಂದ ಜನವರಿ 1, 2004ರ ಒಳಗೆ ಜನಿಸಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Job Alert: ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ- ನಾಳೆಯೇ ಸಂದರ್ಶನ
ವೇತನ:
ನಿಯಮಾನುಸಾರ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 5, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ