Indian Navy Recruitment 2023: ಭಾರತೀಯ ನೌಕಾಪಡೆ(Indian Navy) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 248 ಟ್ರೇಡ್ಸ್ಮ್ಯಾನ್ ಸ್ಕಿಲ್ಡ್ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ(Central Government Jobs) ಅರಸುತ್ತಿರುವವರು ಹಾಗೂ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಬಯಸುತ್ತಿರುವವರು ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. 10ನೇ ತರಗತಿ(SSLC Pass) ಪಾಸಾದವರಿಗೆ ಇದು ಸುವರ್ಣಾವಕಾಶವಾಗಿದೆ. ಫೆಬ್ರವರಿ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ನೌಕಾಪಡೆ |
ಹುದ್ದೆ | ಟ್ರೇಡ್ಸ್ಮ್ಯಾನ್ ಸ್ಕಿಲ್ಡ್ |
ಒಟ್ಟು ಹುದ್ದೆ | 248 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹ 19,900- 63,200 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 27, 2023 |
ಇದನ್ನೂ ಓದಿ: Bengaluru Jobs: ಪ್ರಾಜೆಕ್ಟ್ ಆಫೀಸರ್ ಆಗಬೇಕಾ? ಇಲ್ಲಿದೆ ಅವಕಾಶ- 40 ಸಾವಿರ ಸಂಬಳ
ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಸ್ಎಸ್ಎಲ್ಸಿ/ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 27, 2023 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ/ESM ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (UR) ಅಭ್ಯರ್ಥಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ವೇತನ:
ಮಾಸಿಕ ₹ 19,900- 63,200
ಅರ್ಜಿ ಶುಲ್ಕ:
SC/ST/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 205 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ
ಸ್ಕ್ರೀನಿಂಗ್
ಶಾರ್ಟ್ಲಿಸ್ಟಿಂಗ್
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 27, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ