• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ಇನ್​​ಸ್ಟೆಮ್​​ ಸಂಸ್ಥೆಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ನಾಳೆಯೇ ಕೊನೆ ದಿನ

Job Alert: ಇನ್​​ಸ್ಟೆಮ್​​ ಸಂಸ್ಥೆಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ನಾಳೆಯೇ ಕೊನೆ ದಿನ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅಭ್ಯರ್ಥಿಗಳು ಆನ್​​ಲೈನ್(Online) & ಆಫ್​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 15, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

InStem Recruitment 2023: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್(Institute for Stem Cell Biology and Regenerative Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಜಿಸ್ಟ್ರಾರ್​​/ ಚೀಫ್​ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online) & ಆಫ್​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 15, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಹೆಚ್ಚಿನ ಮಾಹಿತಿಗಾಗಿ instem.res.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್
ಹುದ್ದೆರಿಜಿಸ್ಟ್ರಾರ್​​/ ಚೀಫ್​ ಅಡ್ಮಿನಿಸ್ಟ್ರೇಟಿವ್ ಆಫೀಸರ್​​
ಒಟ್ಟು ಹುದ್ದೆ1
ವಿದ್ಯಾರ್ಹತೆಸಿಎ, ಸಿಎಂಎ, ಸಿಎಸ್, ಎಸ್​​ಎಎಸ್​, ಕಾನೂನು ಪದವಿ, ಸ್ನಾತಕೋತ್ತರ ಪದವಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 15, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ, ಸಿಎಂಎ, ಸಿಎಸ್, ಎಸ್​​ಎಎಸ್​, ಕಾನೂನು ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOBS: ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 50 ಸಾವಿರ ಸಂಬಳ, ಈಗಲೇ ರೆಸ್ಯೂಮ್ ಕಳುಹಿಸಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಮಹಿಳಾ/ PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು - 885 ರೂ.
ಪಾವತಿಸುವ ವಿಧಾನ- ಆನ್​ಲೈನ್​


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.


ಆಡಳಿತಾಧಿಕಾರಿ ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಸೈನ್ಸ್ ಮತ್ತು ರಿಜೆನೆರೇಟಿವ್ ಮೆಡಿಸಿನ್ (ಡಿಬಿಟಿ-ಇನ್‌ಸ್ಟೆಮ್)
ಜಿಕೆವಿಕೆ ಪೋಸ್ಟ್
ಬಳ್ಳಾರಿ ರಸ್ತೆ
ಬೆಂಗಳೂರು-560065


ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2023
ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15, 2023
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 22, 2023


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23666385 ಗೆ ಕರೆ ಮಾಡಿ.

Published by:Latha CG
First published: