Intelligence Bureau Recruitment 2023: ಗುಪ್ತಚರ ಇಲಾಖೆ(Intelligence Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1675 ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್(Security Assistant), ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ(Central Government Job) ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಗುಪ್ತಚರ ಇಲಾಖೆ |
ಹುದ್ದೆ | ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಎಂಟಿಎಸ್ |
ಒಟ್ಟು ಹುದ್ದೆ | 1675 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹ 21,700-69,100 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 17, 2023 |
ವಯೋಮಿತಿ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಇದನ್ನೂ ಓದಿ: ITBP Recruitment 2023: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 69,000 ಸಂಬಳ
ವೇತನ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- ಮಾಸಿಕ ₹ 21,700-69,100
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾಸಿಕ ₹ 18,000-56,900
ಅರ್ಜಿ ಶುಲ್ಕ:
ಜನರಲ್/ ಒಬಿಸಿ/EWS ಪುರುಷ ಅಭ್ಯರ್ಥಿಗಳು- 50 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು.
ನೇಮಕಾತಿ ಪ್ರಕ್ರಿಯೆ ಶುಲ್ಕ- 450 ರೂ.
ಪಾವತಿಸುವ ವಿಧಾನ- ಆನ್ಲೈನ್/ ಚಲನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪರ್ಸನಾಲಿಟಿ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 17, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಫೆಬ್ರವರಿ 21, 2023
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9986640811 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ