• Home
  • »
  • News
  • »
  • jobs
  • »
  • 10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ- ಮಾಸಿಕ ವೇತನ ₹ 69,000

10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ- ಮಾಸಿಕ ವೇತನ ₹ 69,000

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಫೆಬ್ರವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • 3-MIN READ
  • Last Updated :
  • New Delhi, India
  • Share this:

Intelligence Bureau Recruitment 2023: ಗುಪ್ತಚರ ಇಲಾಖೆ(Intelligence Bureau ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1675 ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್(Security Assistant), ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ(Central Government Job) ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

 ಸಂಸ್ಥೆ ಗುಪ್ತಚರ ಇಲಾಖೆ
 ಹುದ್ದೆ ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಮಲ್ಟಿ ಟಾಸ್ಕಿಂಗ್ ಸ್ಟಾಫ್
 ಒಟ್ಟು ಹುದ್ದೆ 1675
 ವಿದ್ಯಾರ್ಹತೆ 10ನೇ ತರಗತಿ
 ವೇತನ ಮಾಸಿಕ ₹ 18,000-69,100
 ಉದ್ಯೋಗದ ಸ್ಥಳ ಭಾರತ
 ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 10, 2023


ವಿದ್ಯಾರ್ಹತೆ:
ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.


ಇದನ್ನೂ ಓದಿ: Banking Jobs: 10ನೇ ಕ್ಲಾಸ್ ಪಾಸಾದವರಿಗೆ ಬ್ಯಾಂಕ್ ಉದ್ಯೋಗ-ತಿಂಗಳಿಗೆ 52,000 ಸಂಬಳ


ವಯೋಮಿತಿ
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ


ವೇತನ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- ಮಾಸಿಕ ₹ 21,700-69,100
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾಸಿಕ ₹ 18,000-56,900


ಅರ್ಜಿ ಶುಲ್ಕ:
ಜನರಲ್/ ಒಬಿಸಿ/EWS ಪುರುಷ ಅಭ್ಯರ್ಥಿಗಳು- 50 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು.
ನೇಮಕಾತಿ ಪ್ರಕ್ರಿಯೆ ಶುಲ್ಕ- 450 ರೂ.
ಪಾವತಿಸುವ ವಿಧಾನ- ಆನ್​ಲೈನ್​/ ಚಲನ್



ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪರ್ಸನಾಲಿಟಿ ಟೆಸ್ಟ್
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಫೆಬ್ರವರಿ 14, 2023

Published by:Latha CG
First published: