IOCL Recruitment 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಎಕ್ಸಿಕ್ಯೂಟಿವ್ (Executive) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆ | ಎಕ್ಸಿಕ್ಯೂಟಿವ್ |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | 50,000- 1,60,000 ರೂ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜುಲೈ 15, 2023 |
ವಿದ್ಯಾರ್ಹತೆ:
ಕಾರ್ಪೊರೇಟ್ ಕಮ್ಯುನಿಕೇಷನ್ಸ್- ಸ್ನಾತಕೋತ್ತರ ಪದವಿ, ಪತ್ರಿಕೋದ್ಯಮ/ ಸಮೂಹ ಮಾಧ್ಯಮ/ ಪಬ್ಲಿಕ್ ರಿಲೇಶನ್ಸ್ನಲ್ಲಿ ಸ್ನಾತಕೋತ್ತರ ಪದವಿ.
ಹ್ಯೂಮನ್ ರಿಸೋರ್ಸಸ್- ಎಂಬಿಎ, ಹ್ಯೂಮನ್ ರಿಸೋರ್ಸ್/ ಇಂಡಸ್ಟ್ರಿಯಲ್ ರಿಲೇಶನ್ಸ್/ ಲೇಬರ್ ವೆಲ್ಫೇರ್/ ಪರ್ಸನಲ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವಿ,
ಮಾರ್ಕೆಟಿಂಗ್- ಸ್ನಾತಕೋತ್ತರ ಪದವಿ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ನಲ್ಲಿ ಎಂಬಿಎ
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023 ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ಇದನ್ನೂ ಓದಿ: JOBS: ಉಡುಪಿಯಲ್ಲಿ PU ಆದವರಿಗೆ ಕೆಲಸ ಇದೆ- ತಿಂಗಳಿಗೆ 25,000 ಸಂಬಳ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ತಿಂಗಳಿಗೆ 50,000- 1,60,000 ರೂ. ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪ್ರಾವೀಣ್ಯತೆ ಪರೀಕ್ಷೆ
ಗುಂಪು ಚರ್ಚೆ (GD) ಮತ್ತು ಗ್ರೂಪ್ ಟಾಸ್ಕ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ