• Home
  • »
  • News
  • »
  • jobs
  • »
  • ISRO Recruitment 2022: ಡಿಗ್ರಿ ಆಗಿದ್ರೆ ಇಸ್ರೋದಲ್ಲಿ ಕೆಲಸ ಮಾಡುವ ಅವಕಾಶ- 7 ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ

ISRO Recruitment 2022: ಡಿಗ್ರಿ ಆಗಿದ್ರೆ ಇಸ್ರೋದಲ್ಲಿ ಕೆಲಸ ಮಾಡುವ ಅವಕಾಶ- 7 ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ

ಇಸ್ರೋ

ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 28, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

  • Share this:

    ISRO Recruitment 2022: ಪ್ರತಿಷ್ಟಿತ ಇಸ್ರೋದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕರೆ ಯಾರು ತಾನೇ ಮಿಸ್ ಮಾಡಿಕೊಳ್ತಾರೆ. ಸದ್ಯ 7 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ, ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
    ಹುದ್ದೆಅಸಿಸ್ಟೆಂಟ್
    ಒಟ್ಟು ಹುದ್ದೆ7
    ವೇತನಮಾಸಿಕ ₹ 25,500
    ಉದ್ಯೋಗದ ಸ್ಥಳಕರ್ನಾಟಕ, ನವದೆಹಲಿ


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ :
    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 28, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.


    ಇದನ್ನೂ ಓದಿ: HAL Recruitment 2022: ಬೆಂಗಳೂರಿನ HALನಲ್ಲಿ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದೆ-ಪ್ರತಿ ಭೇಟಿಗೆ 5 ಸಾವಿರ


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    ಎಸ್​​ಸಿ ಅಭ್ಯರ್ಥಿಗಳು- 5 ವರ್ಷ


    ಅರ್ಜಿ ಶುಲ್ಕ:
    SC/ST/PWD/ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕ ಇಲ್ಲ
    ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 100 ರೂ.
    ಪಾವತಿಸುವ ಬಗೆ- ಆನ್​ಲೈನ್/ಆಫ್​ಲೈನ್​


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸ್ಕಿಲ್ ಟೆಸ್ಟ್


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 28/12/2022
    ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನ: 30/12/2022

    Published by:Latha CG
    First published: