ISRO Recruitment 2023: ನೀವು ಪದವಿ ಪಡೆದಿದ್ದರೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(Indian Space Research Organisation), ISRO ದಲ್ಲಿ ಉದ್ಯೋಗವನ್ನು(Job) ಪಡೆಯಬಹುದು. ಹೀಗಾಗಿ ವಿಳಂಬ ಮಾಡದೆ, ನೀವು ಇಲ್ಲಿ ನೀಡಲಾದ ನೇಮಕಾತಿಯ(Recruitment) ಬಗ್ಗೆ ಎಲ್ಲಾ ಮಾಹಿತಿಯನ್ನು (Information) ಪರಿಶೀಲಿಸಿ ಮತ್ತು ನಿಗದಿತ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ |
ಹುದ್ದೆ | ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ |
ಒಟ್ಟು ಹುದ್ದೆ | 526 |
ವೇತನ | ತಿಂಗಳಿಗೆ 25,000 |
ಉದ್ಯೋಗದ ಸ್ಥಳ | ಭಾರತ |
ಇದನ್ನೂ ಓದಿ: NCDC Recruitment 2023: ಎಂಬಿಎ ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ- 50,000 ಸಂಬಳ
ಯಾರು ಅರ್ಜಿ ಸಲ್ಲಿಸಬಹುದು?
ಕಡ್ಡಾಯವಾಗಿ 60% ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರುವ ಮತ್ತು ಸ್ಟೆನೋಗ್ರಾಫರ್ ಆಗಿ 1 ವರ್ಷದ ಕೆಲಸ ಮಾಡಿದ ಅನುಭವ ಇರುವ ಅಭ್ಯರ್ಥಿಗಳು ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸಹಾಯಕ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೇಕಡಾ 60 ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿ:
ಗರಿಷ್ಠ 28 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 31 ವರ್ಷ ಮತ್ತು ಎಸ್ಸಿ-ಎಸ್ಟಿ ಅಭ್ಯರ್ಥಿಳಿಗೆ 33 ವರ್ಷಗಳ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ 10th, PU ಪಾಸಾದವರಿಗೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ isro.gov.in ಗೆ ಭೇಟಿ ನೀಡಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 9, 2023 ಎಂಬುದನ್ನು ಗಮನಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ