ISRO Recruitment 2023: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 27 ಗ್ರಾಜುಯೇಟ್ & ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ, ಭೂಪಾಲ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ |
ಹುದ್ದೆ | ಗ್ರಾಜುಯೇಟ್ & ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ |
ಒಟ್ಟು ಹುದ್ದೆ | 27 |
ವಿದ್ಯಾರ್ಹತೆ | ಬಿಇ/ ಬಿ.ಟೆಕ್, ಬಿ.ಎಸ್ಸಿ |
ವೇತನ | ಮಾಸಿಕ ₹ 9000 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 19, 2023 |
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ- ಬಿಇ/ ಬಿ.ಟೆಕ್, ಬಿ.ಎಸ್ಸಿ
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ- ಡಿಪ್ಲೊಮಾ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಜನರಲ್ ಸ್ಟ್ರೀಮ್)- ಬಿ.ಎಸ್ಸಿ, ಬಿಎ
ಇದನ್ನೂ ಓದಿ: Banking Jobs: ಯೆಸ್ ಬ್ಯಾಂಕ್ನಲ್ಲಿ ಭರ್ಜರಿ ಉದ್ಯೋಗಾವಕಾಶ- ಇವತ್ತೇ ಅಪ್ಲೈ ಮಾಡಿ
ವೇತನ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ- ಮಾಸಿಕ ₹ 9000
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ- ಮಾಸಿಕ ₹ 8000
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಜನರಲ್ ಸ್ಟ್ರೀಮ್)- ಮಾಸಿಕ ₹ 9000
ಆಯ್ಕೆ ಪ್ರಕ್ರಿಯೆ
ಮೆರಿಟ್ ಲಿಸ್ಟ್
ಸಂದರ್ಶನ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಮತ್ತು ಭೂಪಾಲ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ, ಹೆಚ್ಚಿನ ವಿವರಗಳಿಗಾಗಿ ಇಸ್ರೋ ಅಧಿಸೂಚನೆ 2023 ನ್ನು ಪರಿಶೀಲಿಸಿ. ನೋಟಿಫಿಕೇಶನ್ ಈ ಕೆಳಗೆ ಇದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 19, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 08172-273307/08172-273309 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ