ISRO Recruitment 2023: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (Indian Space Research Organisation-ISRO) ಖಾಲಿ ಇರುವ 526 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ(Extended). ಒಟ್ಟು 526 ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಇಸ್ರೋ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಮೊದಲು ಜನವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದ್ದು, ಜನವರಿ 16, 2023 ರವರೆಗೆ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಸಕ್ತರು ಈ ಕೂಡಲೇ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುಲರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ |
ಹುದ್ದೆ | ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 526 |
ವೇತನ | ಮಾಸಿಕ ₹ 25,500 |
ಉದ್ಯೋಗದ ಸ್ಥಳ | ಭಾರತ |
ಅಸಿಸ್ಟೆಂಟ್- 339
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್- 153
ಮೇಲ್ದರ್ಜೆ ಡಿವಿಶನ್ ಕ್ಲರ್ಕ್-16
ಸ್ಟೆನೋಗ್ರಾಫರ್- 14
ಅಸಿಸ್ಟೆಂಟ್ (ಸ್ಪೇಸ್)- 3
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಸ್ಪೇಸ್)- 1
ವಿದ್ಯಾರ್ಹತೆ:
ಅಸಿಸ್ಟೆಂಟ್- ಪದವಿ
ಜೂನಿಉರ್ ಪರ್ಸನಲ್ ಅಸಿಸ್ಟೆಂಟ್- ಡಿಪ್ಲೋಮಾ, ಪದವಿ
ಮೇಲ್ದರ್ಜೆ ಡಿವಿಶನ್ ಕ್ಲರ್ಕ್-ಪದವಿ
ಸ್ಟೆನೋಗ್ರಾಫರ್- ಡಿಪ್ಲೋಮಾ, ಪದವಿ
ಅಸಿಸ್ಟೆಂಟ್ (ಸ್ಪೇಸ್)- ಪದವಿ
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಸ್ಪೇಸ್)- ಡಿಪ್ಲೋಮಾ, ಪದವಿ
ಇದನ್ನೂ ಓದಿ: ಕರ್ನಾಟಕದಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ- ಆಸಕ್ತರು ಈಗಲೇ ಅಪ್ಲೈ ಮಾಡಿ
ವಯೋಮಿತಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 9, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು-3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಮಹಿಳಾ/SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ.
ಪಾವತಿಸುವ ವಿಧಾನ- ಆನ್ಲೈನ್/ ಆಫ್ಲೈನ್
ಇದನ್ನೂ ಓದಿ: ಜವಳಿ ಸಚಿವಾಲಯದಲ್ಲಿ 10th ಪಾಸಾದವರಿಗೆ ಬಂಪರ್ ಉದ್ಯೋಗ-ಈಗಲೇ ಅರ್ಜಿ ಹಾಕಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/01/2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ: 18/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ