ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಖಾಲಿ ಇರುವ 34 ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (NRSC) ಜೂನಿಯರ್ ರಿಸರ್ಚ್ ಫೆಲೋ (JRF), ರಿಸರ್ಚ್ ಸೈಂಟಿಸ್ಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 7 ಆಗಿದೆ. ಅರ್ಹ ಅಭ್ಯರ್ಥಿಗಳು ISRO ಅಧಿಕೃತ ವೆಬ್‌ಸೈಟ್ isro.gov.in ಮತ್ತು nrsc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಜೂನಿಯರ್ ರಿಸರ್ಚ್ ಫೆಲೋ JRF | 20 ಹುದ್ದೆಗಳಿಗೆ ನೇಮಕಾತಿ |
ಪ್ರಾಜೆಕ್ಟ್ ಸೈಂಟಿಸ್ಟ್ | 03 ಹುದ್ದೆಗಳು |
ಪ್ರಾಜೆಕ್ಟ್ ಅಸೋಸಿಯೇಟ್ | 07 ಹುದ್ದೆಗಳು |
ಸಂಶೋಧನಾ ವಿಜ್ಞಾನಿ | 04 ಹುದ್ದೆಗಳು |
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಮಾರ್ಚ್ 25 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಏಪ್ರಿಲ್ 7 |
ಅರ್ಜಿ ಸಲ್ಲಿಕೆ | ಇಲ್ಲಿ ಕ್ಲಿಕ್ ಮಾಡಿ |
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಪಟ್ಟ ವಿಭಾಗದಲ್ಲಿ BE / B.Tech / B.Sc / M.Sc ಪದವಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳನ್ನು CBT/ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: CPRI Recruitment 2023: ಪದವೀಧರರಿಗೆ ಭರ್ಜರಿ ಉದ್ಯೋಗಾವಕಾಶ; ತಿಂಗಳಿಗೆ 1.12 ಲಕ್ಷ ರೂ. ಸಂಬಳ
ಇಸ್ರೋದಲ್ಲಿ ಆಯ್ಕೆಯಾದ ಮೇಲೆ ಸಂಬಳ ದೊರೆಯುತ್ತದೆ
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 56,000 ರೂ. ವರೆಗೆ ವೇತನವನ್ನು ನೀಡಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ