ITBP Recruitment 2023: ಇಂಡೋ-ಟೆಬೆಟಿಯನ್ ಗಡಿ ಪೊಲೀಸ್ ಪಡೆ(Indo-Tibetan Border Police Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಹೆಡ್ ಕಾನ್ಸ್ಟೇಬಲ್ (ಮಿಡ್ವೈಫ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜುಲೈ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡೋ-ಟೆಬೆಟಿಯನ್ ಗಡಿ ಪೊಲೀಸ್ ಪಡೆ |
ಹುದ್ದೆ | ಹೆಡ್ ಕಾನ್ಸ್ಟೇಬಲ್ |
ಒಟ್ಟು ಹುದ್ದೆ | 81 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ 25,500-81,100 ರೂ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜುಲೈ 8, 2023 |
ಉದ್ಯೋಗದ ಸ್ಥಳ:
ಇಂಡೋ-ಟೆಬೆಟಿಯನ್ ಗಡಿ ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ: Karnataka Jobs: ಬೆಂಗಳೂರು & ಧಾರವಾಡದಲ್ಲಿ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ
ವೇತನ:
ಇಂಡೋ-ಟೆಬೆಟಿಯನ್ ಗಡಿ ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,500-81,100 ರೂ. ಸಂಬಳ ಕೊಡಲಾಗುತ್ತದೆ.
ವಯೋಮಿತಿ:
ಇಂಡೋ-ಟೆಬೆಟಿಯನ್ ಗಡಿ ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 8, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಇದನ್ನೂ ಓದಿ: UoM Jobs: ಮೈಸೂರು ಯೂನಿವರ್ಸಿಟಿಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಫಿಜಿಕಲ್ ಎಫೆಸಿಯೆನ್ಸಿ ಟೆಸ್ಟ್
ಫಿಜಿಕಲ್ ಸ್ಟ್ಯಾಂಡರ್ಡ್ ಟೆಸ್ಟ್
ಲಿಖಿತ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ
DME/RME
ಅಭ್ಯರ್ಥಿಗಳು ಆನ್ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 8, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ