JNCASR Recruitment 2023: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್( Jawaharlal Nehru Centre For Advanced Scientific Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 4, 2023 ಕ್ಕೆ ಮುನ್ನ ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ |
ಹುದ್ದೆ | ಆಫೀಸ್ ಎಕ್ಸಿಕ್ಯೂಟಿವ್ |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 30,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: EDII Recruitment 2023: ಪಿಜಿ ಕಂಪ್ಲೀಟ್ ಆಗಿದ್ರೆ ಬೆಂಗಳೂರಿನಲ್ಲಿದೆ ನೋಡಿ ಕೆಲಸ- 12 ಲಕ್ಷದವರೆಗೆ ಸಂಬಳದ ಪ್ಯಾಕೇಜ್
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜನವರಿ 4, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಜೊತೆಗೆ ಮೀಸಲಾತಿಗನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 30,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 21/12/2022
ಇ-ಮೇಲ್ ಕಳುಹಿಸಲು ಕೊನೆಯ ದಿನ: 04/01/2023
ಇದನ್ನೂ ಓದಿ: KRCL Recruitment 2023: ಎಂಜಿನಿಯರಿಂಗ್ ಆದವರಿಗೆ ಕೊಂಕಣ ರೈಲ್ವೆಯಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 77 ಸಾವಿರ ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್ನೊಂದಿಗೆ ಇ-ಮೇಲ್ ಐಡಿ acoord@jncasr.ac.in ಗೆ ಜನವರಿ 4ರೊಳಗೆ ಕಳುಹಿಸಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ