• Home
  • »
  • News
  • »
  • jobs
  • »
  • JOB ALERT: ಕಾಫಿ ಬೋರ್ಡ್​​ನಲ್ಲಿ ಪದವೀಧರರಿಗೆ ಬಂಪರ್ ಉದ್ಯೋಗ- 50 ಸಾವಿರ ಸಂಬಳ

JOB ALERT: ಕಾಫಿ ಬೋರ್ಡ್​​ನಲ್ಲಿ ಪದವೀಧರರಿಗೆ ಬಂಪರ್ ಉದ್ಯೋಗ- 50 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಸಕ್ತರು ಜನವರಿ 20ರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದೊಂದು ಬಂಪರ್ ಆಫರ್ ಆಗಿದೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

Coffee Board Recruitment 2023: ಭಾರತೀಯ ಕಾಫಿ ಮಂಡಳಿಯು(Coffee Board of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಬರಿಸ್ಟಾ ಟ್ರೇನರ್ಸ್(Barista Trainers) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಜನವರಿ 20ರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದೊಂದು ಬಂಪರ್ ಆಫರ್ ಆಗಿದೆ.


ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ indiacoffee.org ಗೆ ಭೇಟಿ ನೀಡಬಹುದು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/01/2023
ಇ-ಮೇಲ್ ಕಳುಹಿಸಲು ಕೊನೆ ದಿನ: ಜನವರಿ 20, 2023


ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ


ಇಲ್ಲಿ ಅರ್ಜಿ ಹಾಕಿ:


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನ್ನು ಇ-ಮೇಲ್ ಐಡಿ cqd.coffeeboard@gmail.com ಗೆ ಜನವರಿ 20 ರೊಳಗೆ ಕಳುಹಿಸಬೇಕು.

ಸಂಸ್ಥೆಭಾರತೀಯ ಕಾಫಿ ಮಂಡಳಿ
ಹುದ್ದೆಬರಿಸ್ಟಾ ಟ್ರೇನರ್ಸ್​
ಒಟ್ಟು ಹುದ್ದೆ5
ವೇತನಮಾಸಿಕ ₹ 50,000
ಉದ್ಯೋಗದ ಸ್ಥಳಬೆಂಗಳೂರು

ಶೈಕ್ಷಣಿಕ ಅರ್ಹತೆ ಮತ್ತು ಅನುಭವ


ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಹೋಟೆಲ್​ ಮ್ಯಾನೇಜ್​ಮೆಂಟ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.


ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. 3 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತದೆ.


ಇದನ್ನೂ ಓದಿ: Government Jobs: ನಬಾರ್ಡ್​​ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ-ಈಗಲೇ ಅಪ್ಲೈ ಮಾಡಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜನವರಿ 20, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ವೇತನ:
ಬರಿಸ್ಟಾ ಟ್ರೇನರ್ಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ಸಂಬಳ ಕೊಡಲಾಗುತ್ತದೆ.

Published by:Latha CG
First published: