LIC Recruitment 2023: ಭಾರತೀಯ ಜೀವ ವಿಮಾ ನಿಗಮ(Life Insurance Corporation of India -LIC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 300 ಸಹಾಯಕ ಆಡಳಿತಾಧಿಕಾರಿ(Assistant Administrative Officers-AAO) ಹುದ್ದೆಗಳು ಖಾಲಿ ಇವೆ. ಆಸಕ್ತರು ಎಲ್ಐಸಿಯ ಅಧಿಕೃತ ವೆಬ್ಸೈಟ್ಗೆ(Official Website) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದೇ ಜನವರಿ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ತಡಮಾಡದೇ ಈಗಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಜೀವ ವಿಮಾ ನಿಗಮ |
ಹುದ್ದೆ | ಸಹಾಯಕ ಆಡಳಿತಾಧಿಕಾರಿ |
ಒಟ್ಟು ಹುದ್ದೆ | 300 |
ವಿದ್ಯಾರ್ಹತೆ | ಪದವಿ |
ವೇತನ | ನಿಯಮಾನುಸಾರ |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 31, 2023 |
ಇದನ್ನೂ ಓದಿ: BBMP ನೇಮಕಾತಿ- ಖಾಲಿ ಇರುವ 3673 ಹುದ್ದೆಗಳಿಗೆ ಜ. 30ರೊಳಗೆ ಅಪ್ಲೈ ಮಾಡಿ
ವಯೋಮಿತಿ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ- 85 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಈ ಹಂತಗಳ ಮೂಲಕ ಅರ್ಜಿ ಹಾಕಿ.
ಮೊದಲು ಅಧಿಕೃತ ವೆಬ್ಸೈಟ್ licindia.in ಗೆ ಭೇಟಿ ನೀಡಿ.
ಹೋಂ ಪೇಜ್ನಲ್ಲಿ ಕಾಣಸಿಗುವ “Career Recruitment of AAO(Generalist)-2023” ಮೇಲೆ ಕ್ಲಿಕ್ ಮಾಡಿ.
ಬಳಿಕ “Apply Online” ಮೇಲೆ ಕ್ಲಿಕ್ಕಿಸಿ. ರಿಜಿಸ್ಟ್ರೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ರಿಜಿಸ್ಟರ್ ಆಗಿ ಈ ಹುದ್ದೆಗಳಿಗೆ ಅರ್ಜಿ ಹಾಕಿ.
ಅರ್ಜಿ ಶುಲ್ಕ ಪಾವತಿಸಿ ಬಳಿಕ ಅರ್ಜಿಯನ್ನು ಸಬ್ಮಿಟ್ ಮಾಡಿ.
ಬಳಿಕ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸಂದರ್ಶನ
ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆಯಲಾಗುತ್ತದೆ.
ನೇರವಾಗಿ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಪರೀಕ್ಷೆಯ ಬಗ್ಗೆ ಮಾಹಿತಿ:
ಇದೇ ಫೆಬ್ರವರಿ 17, 2023ರಂದು ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೂ ಮುನ್ನ ಅಂದರೆ 7-10 ದಿನ ಮುಂಚಿತವಾಗಿ ಅಡ್ಮಿಟ್ ಕಾರ್ಡ್ ಲಭ್ಯವಾಗಲಿದೆ. ಮುಖ್ಯ ಪರೀಕ್ಷೆ ಮಾರ್ಚ್ 18, 2023ರಂದು ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ