Ministry of Labour & Employment Recruitment 2023: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ(Ministry of Labour & Employment Recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 43 ಯಂಗ್ ಪ್ರೊಫೆಶನಲ್(Young Professional) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಇದೇ ಜನವರಿ 27, 2023 ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 43 |
ವೇತನ | ಮಾಸಿಕ ₹ 50,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 27, 2023 |
ಇದನ್ನೂ ಓದಿ: JOBS: ತಿಂಗಳಿಗೆ 25,000 ಸಂಬಳ- ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ಈಗಲೇ ಅರ್ಜಿ ಹಾಕಿ
ವಿದ್ಯಾರ್ಹತೆ:
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎ, ಬಿಇ/ ಬಿ.ಟೆಕ್, ಬಿ.ಎಡ್, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 24 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
ಮಾಸಿಕ ₹ 50,000
ಉದ್ಯೋಗದ ಸ್ಥಳ
ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರ ಪ್ರದೇಶ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 27, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ