Ministry of Minority Affairs Recruitment 2023: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು(Ministry of Minority Affairs) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕನ್ಸಲ್ಟೆಂಟ್(Consultant) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕೃತ ವೆಬ್ಸೈಟ್(Official Website)ಗೆ ಭೇಟಿ ನೀಡಬಹುದು.
ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ, ಪ್ರಸ್ತುತ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಅಭ್ಯರ್ಥಿಗಳು ಜನವರಿ 6, 2023ರೊಳಗೆ ಅರ್ಜಿ ಸಲ್ಲಿಸಬೇಕು. ಸಚಿವಾಲಯದ ಅಧಿಕೃತ ವೆಬ್ಸೈಟ್ನಲ್ಲಿಯೇ ಅರ್ಜಿ ನಮೂನೆ ದೊರೆಯಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಹಾಕಬೇಕು. ಈ ಗಡುವಿನ ಯಾವುದೇ ಬದಲಾವಣೆಯನ್ನು ನೋಟಿಸ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ |
ಹುದ್ದೆ | ಕನ್ಸಲ್ಟೆಂಟ್ |
ವಿದ್ಯಾರ್ಹತೆ | ಪದವಿ |
ವೇತನ | ತಿಂಗಳಿಗೆ 60,000 |
ಅರ್ಜಿ ಸಲ್ಲಿಸಲು ಕೊನೆ ದಿನ | 06/01/2023 |
ಉದ್ಯೋಗದ ಸ್ಥಳ | ಭಾರತ |
ಅರ್ಹತೆ:
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ESIC: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ-ತಿಂಗಳಿಗೆ 68,000 ಸಂಬಳ
ಜೊತೆಗೆ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 2-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. 4 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವೇತನ ಎಷ್ಟು?
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ವೇತನ ನೀಡಲಾಗುತ್ತದೆ.
ಅವಧಿ:
ಅಭ್ಯರ್ಥಿಗಳನ್ನು ಆರಂಭದಲ್ಲಿ 1 ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಕೆಲಸದ ಅಗತ್ಯತೆ ಹಾಗೂ ಕೌಶಲ್ಯಗಳ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ