• ಹೋಂ
  • »
  • ನ್ಯೂಸ್
  • »
  • Jobs
  • »
  • Government Job: ಇಂಟೆಲಿಜೆನ್ಸ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಡಿಗ್ರಿ ಆಗಿದ್ರೆ ಅಪ್ಲೈ ಮಾಡಿ

Government Job: ಇಂಟೆಲಿಜೆನ್ಸ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಡಿಗ್ರಿ ಆಗಿದ್ರೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜೂನ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • 5-MIN READ
  • Last Updated :
  • New Delhi, India
  • Share this:

NCB Recruitment 2023: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 49 ಇಂಟೆಲಿಜೆನ್ಸ್ ಆಫೀಸರ್ (Intelligence Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ (Bengaluru) 3 ಪೋಸ್ಟ್​ಗಳು ಖಾಲಿ ಇವೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
ಹುದ್ದೆಇಂಟೆಲಿಜೆನ್ಸ್​ ಆಫೀಸರ್
ಒಟ್ಟು ಹುದ್ದೆ49
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 9300-34,800
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 4, 2023

ವಿದ್ಯಾರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Job Alert: ಮೈಸೂರಿನ CFTRIನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 25,000 ಸಂಬಳ


ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್​ 4, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 9300-34,800


ಇದನ್ನೂ ಓದಿ: IIIT Bangaloreನಲ್ಲಿ ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡೆಪ್ಯುಟಿ ಡೈರೆಕ್ಟರ್ ಜನರಲ್ (HQ)
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
ವೆಸ್ಟ್ ಬ್ಲಾಕ್ ನಂ.1
ವಿಂಗ್ ನಂ.5
ಆರ್.ಕೆ.ಪುರಂ
ನವದೆಹಲಿ-110066


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 4, 2023

First published: